ಕಾರವಾರ: ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟಗಳಲ್ಲಿ ಸಾಧನೆ ತೋರಿದ ಕಾರವಾರ ಕ್ರೀಡಾ ವಸತಿ ನಿಲಯದ ಒಟ್ಟು 19 ಕ್ರೀಡಾಪಟುಗಳು ರಾಜ್ಯ ಮಟ್ಟದ ಸ್ಪರ್ಧೆಗಳಿಗೆ ಆಯ್ಕೆಯಾಗಿದ್ದಾರೆ.
ಭಟ್ಕಳ ತಾಲೂಕಿನಲ್ಲಿ ಅಕ್ಟೋಬರ್ 3ರಂದು ನಡೆದ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾಕೂಟದ 17 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದಲ್ಲಿ ವಸತಿ ನಿಲಯದ 14 ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಅರ್ಹತೆ ಪಡೆದಿದ್ದಾರೆ.
ಸೆಪ್ಟೆಂಬರ್ 29ರಂದು ಅಂಕೋಲಾ ತಾಲೂಕಿನಲ್ಲಿ ನಡೆದ 14 ವರ್ಷದೊಳಗಿನ ಬಾಲಕ ಮತ್ತು ಬಾಲಕಿಯರ ವಿಭಾಗದ ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಐವರು ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಕ್ರೀಡಾಪಟುಗಳ ಸಾಧನೆಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರವಿ ನಾಯಕ ಹಾಗೂ ಅಥ್ಲೆಟಿಕ್ಸ್ ತರಬೇತುದಾರ ಶಿವಾನಂದ ನಾಯ್ಕ ಅಭಿನಂದನೆ ಸಲ್ಲಿಸಿದ್ದಾರೆ.


