Thursday, October 22, 2026
HomeLocal Newsಯಲ್ಲಾಪುರ | ಬೀದಿ ನಾಯಿಗಳ ಹಾವಳಿ; ಸಾರ್ವಜನಿಕರಲ್ಲಿ ಆತಂಕ

ಯಲ್ಲಾಪುರ | ಬೀದಿ ನಾಯಿಗಳ ಹಾವಳಿ; ಸಾರ್ವಜನಿಕರಲ್ಲಿ ಆತಂಕ

ಯಲ್ಲಾಪುರ: ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಹಾಗೂ ಪ್ರಯಾಣಿಕರಲ್ಲಿ ಆತಂಕ ಮೂಡಿಸಿದೆ. ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ ಸೇರಿದಂತೆ ಜನನಿಬಿಡ ಪ್ರದೇಶಗಳಲ್ಲಿ ನಾಯಿಗಳು ಗುಂಪು ಗುಂಪಾಗಿ ಸಂಚರಿಸುತ್ತಿದ್ದು, ಅವುಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಕೇಳಿಬಂದಿದೆ.

ಕೆಲ ದಿನಗಳ ಹಿಂದೆ ಪಟ್ಟಣದ ಕಾಳಮ್ಮನಗರ ವ್ಯಾಪ್ತಿಯಲ್ಲಿ ಬೀದಿ ನಾಯಿಗಳು ಪುಟ್ಟ ಮಗುವಿನ ಮೇಲೆ ದಾಳಿ ನಡೆಸಿ ಗಾಯಗೊಳಿಸಿದ್ದವು. ಈ ಘಟನೆ ಬಳಿಕವೂ ಪಟ್ಟಣದಲ್ಲಿ ಬೀದಿ ನಾಯಿಗಳ ಹಾವಳಿ ಕಡಿಮೆಯಾಗಿಲ್ಲ ಎಂಬುದು ಸ್ಥಳೀಯರ ಆತಂಕಕ್ಕೆ ಕಾರಣವಾಗಿದೆ.

ಪಟ್ಟಣದ ಬಸ್ ನಿಲ್ದಾಣ, ಸಂತೆ ಮಾರುಕಟ್ಟೆ, ದೇವಿ ದೇವಸ್ಥಾನ ರಸ್ತೆ ಹಾಗೂ ಬಸವೇಶ್ವರ ವೃತ್ತದ ಸುತ್ತಮುತ್ತ ನಾಯಿಗಳು ಹೆಚ್ಚಾಗಿ ಕಾಣಿಸಿಕೊಳ್ಳುತ್ತಿವೆ. ಹಗಲು-ರಾತ್ರಿ ಎನ್ನದೆ ರಸ್ತೆಯಲ್ಲಿ ಸಂಚರಿಸುವ ನಾಯಿಗಳು ಪರಸ್ಪರ ಕಚ್ಚಾಡುತ್ತ, ಬೊಗಳುತ್ತ ಸಾರ್ವಜನಿಕರಿಗೆ ಕಿರಿಕಿರಿ ಉಂಟುಮಾಡುತ್ತಿವೆ ಎನ್ನಲಾಗಿದೆ.

ರಾತ್ರಿ ವೇಳೆಯಲ್ಲಿ ಬಸ್ ನಿಲ್ದಾಣದ ಆವರಣದಲ್ಲಿ ನಾಯಿಗಳು ಗುಂಪುಗೂಡುವುದರಿಂದ ಪ್ರಯಾಣಿಕರು ಭಯದಿಂದ ಓಡಾಡುವಂತಾಗಿದೆ. ವಿಶೇಷವಾಗಿ ಮಕ್ಕಳು, ವೃದ್ಧರು ಹಾಗೂ ರಾತ್ರಿ ಸಂಚರಿಸುವವರು ಎಚ್ಚರಿಕೆ ವಹಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.

ಬೀದಿ ನಾಯಿಗಳಿಂದ ಮತ್ತಷ್ಟು ಅಹಿತಕರ ಘಟನೆಗಳು ಸಂಭವಿಸುವ ಮುನ್ನ ಪಟ್ಟಣ ಪಂಚಾಯಿತಿ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಂಡು, ಸಾರ್ವಜನಿಕರ ಸುರಕ್ಷತೆಗೆ ಆದ್ಯತೆ ನೀಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. ಈ ನಿಟ್ಟಿನಲ್ಲಿ ಪಟ್ಟಣ ಪಂಚಾಯಿತಿ ಯಾವ ಕ್ರಮ ಕೈಗೊಳ್ಳಲಿದೆ ಎಂಬುದನ್ನು ಸಾರ್ವಜನಿಕರು ಎದುರು ನೋಡುತ್ತಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share