Friday, October 23, 2026
HomeStateಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ನೇಮಕ

ನವದೆಹಲಿ: ಕರ್ನಾಟಕದ ನೂತನ ರಾಜ್ಯಪಾಲರಾಗಿ ಡಾ. ಸುಧಾ ಯಾದವ್ ಅವರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ. ಅಕ್ಟೋಬರ್ 12ರಂದು ರಾಷ್ಟ್ರಪತಿ ಭವನ ಹೊರಡಿಸಿರುವ ಪ್ರಕಟಣೆಯಲ್ಲಿ ಆರು ರಾಜ್ಯಗಳ ರಾಜ್ಯಪಾಲರ ನೇಮಕ ಮತ್ತು ವರ್ಗಾವಣೆ ವಿವರಗಳನ್ನು ತಿಳಿಸಲಾಗಿದೆ.

ಇದರಂತೆ, ಸಿಕ್ಕಿಂ ರಾಜ್ಯಪಾಲರಾಗಿದ್ದ ಓಂ ಪ್ರಕಾಶ್ ಮಾಥುರ್ ಅವರನ್ನು ಕೇರಳದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಕೇರಳದ ರಾಜ್ಯಪಾಲರಾಗಿದ್ದ ರಾಜೇಂದ್ರ ವಿಶ್ವನಾಥ್ ಅರ್ಲೇಕರ್ ಅವರಿಗೆ ತಮಿಳುನಾಡಿನ ಹೊಣೆಗಾರಿಕೆ ನೀಡಲಾಗಿದೆ.

ಬ್ರಜ್ ಮೋಹನ್ ರಾಮ್ ಅವರನ್ನು ಒಡಿಶಾದ ರಾಜ್ಯಪಾಲರಾಗಿ, ಡಾ. ಸುಧಾ ಯಾದವ್ ಅವರನ್ನು ಕರ್ನಾಟಕದ ರಾಜ್ಯಪಾಲರಾಗಿ ನೇಮಿಸಲಾಗಿದೆ. ಡಾ. ಧಲ್ ಸಿಂಗ್ ಬಿಸೇನ್ ಅವರು ಉತ್ತರಾಖಂಡದ ರಾಜ್ಯಪಾಲರಾಗಿ ಹಾಗೂ ದುಷ್ಯಂತ್ ಗೌತಮ್ ಅವರು ಸಿಕ್ಕಿಂನ ರಾಜ್ಯಪಾಲರಾಗಿ ನೇಮಕಗೊಂಡಿದ್ದಾರೆ.

ಈ ನೇಮಕಾತಿಗಳು ಸಂಬಂಧಪಟ್ಟ ರಾಜ್ಯಗಳಲ್ಲಿ ನೂತನ ರಾಜ್ಯಪಾಲರು ಅಧಿಕಾರ ವಹಿಸಿಕೊಳ್ಳುವ ದಿನದಿಂದ ಜಾರಿಗೆ ಬರಲಿವೆ ಎಂದು ರಾಷ್ಟ್ರಪತಿ ಭವನದ ಪ್ರಕಟಣೆ ತಿಳಿಸಿದೆ.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share