ಕಾರವಾರ: ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಹಾಗೂ ಪದವಿ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಖಾಸಗಿ ಕಂಪನಿಯಲ್ಲಿ ಉದ್ಯೋಗ ಪಡೆಯಲು ಅವಕಾಶವಿದೆ. ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸ್ವಾತಂತ್ರ ಮೈಕ್ರೋಪಿನ್ ಲಿಮಿಟೆಡ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗಾಗಿ ಅ.15ರಂದು ನೇರ ಸಂದರ್ಶನ ಆಯೋಜಿಸಲಾಗಿದೆ.
ಸಂದರ್ಶನವು ಬೆಳಗ್ಗೆ 10ರಿಂದ ಮಧ್ಯಾಹ್ನ 2.30ರವರೆಗೆ ಕುಮಟಾದ ಚಂದಾವರ ರಸ್ತೆಯ ಹೆರವಟ್ಟ ಅಂಚೆ ಕಚೇರಿ ಸಮೀಪ ನಡೆಯಲಿದೆ. 18ರಿಂದ 30 ವರ್ಷ ವಯೋಮಾನದ ಮಹಿಳಾ ಮತ್ತು ಪುರುಷ ಅಭ್ಯರ್ಥಿಗಳು ಭಾಗವಹಿಸಬಹುದು. ಉದ್ಯೋಗದ ಸ್ಥಳಗಳು ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಮುರುಡೇಶ್ವರ, ಶಿರಸಿ ಹಾಗೂ ಸಿದ್ದಾಪುರವಾಗಿವೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ತಮ್ಮ ರೆಸ್ಯೂಮ್ ಪ್ರತಿಯೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು. ಹೆಚ್ಚಿನ ಮಾಹಿತಿಗಾಗಿ 8277005959, 8951460061 ಮೊಬೈಲ್ ಸಂಖ್ಯೆಗಳು ಅಥವಾ 08382-226386 ಕಚೇರಿ ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದು ಎಂದು ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


