Friday, October 23, 2026
HomeLocal Newsಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ವಾಹನ ಪಲ್ಟಿ; 112 ಸಿಬ್ಬಂದಿಯಿಂದ ಸಂಚಾರ ಸುಗಮ

ಗ್ಯಾಸ್ ಸಿಲಿಂಡರ್ ಸಾಗಿಸುತ್ತಿದ್ದ ವಾಹನ ಪಲ್ಟಿ; 112 ಸಿಬ್ಬಂದಿಯಿಂದ ಸಂಚಾರ ಸುಗಮ

ಹಳಿಯಾಳ: ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ ವಾಹನ ರಸ್ತೆ ತಿರುವಿನಲ್ಲಿ ಅಪಘಾತಕ್ಕೀಡಾಗಿ ಮಗುಚಿಬಿದ್ದ ಘಟನೆ ಕರ್ಲಕಟ್ಟಾ ಗ್ರಾಮದ ಮುಖ್ಯ ರಸ್ತೆಯಲ್ಲಿ ಅ.12ರಂದು ಸಂಜೆ ನಡೆದಿದೆ. ಸ್ಥಳಕ್ಕೆ ತಕ್ಷಣ ಧಾವಿಸಿದ ಹಳಿಯಾಳದ ERSS 112 ಸಿಬ್ಬಂದಿ ಗಾಯಗೊಂಡ ಚಾಲಕನನ್ನು ಆಸ್ಪತ್ರೆಗೆ ರವಾನಿಸಿ, ವಾಹನವನ್ನು ರಸ್ತೆಯ ಬದಿಗೆ ತೆರವುಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಸಂಜೆ ಸುಮಾರು 5.30ರ ವೇಳೆಗೆ ತುರ್ತು ಕರೆ ಬಂದ ಹಿನ್ನೆಲೆಯಲ್ಲಿ ಹಳಿಯಾಳ ಪೊಲೀಸ್ ಠಾಣೆ ವ್ಯಾಪ್ತಿಯ ಕರ್ಲಕಟ್ಟಾ ಗ್ರಾಮದ ಘಟನಾ ಸ್ಥಳಕ್ಕೆ 112 ರೂಟ್ ನಂ. 11ರ ಸಿಬ್ಬಂದಿ ತೆರಳಿ ಪರಿಶೀಲಿಸಿದರು. ಮನೆ ಬಳಕೆಯ ಖಾಲಿ ಗ್ಯಾಸ್ ಸಿಲಿಂಡರ್‌ಗಳನ್ನು ಸಾಗಿಸುತ್ತಿದ್ದ KA-28-8176 ನೋಂದಣಿ ಸಂಖ್ಯೆಯ ವಾಹನ ರಸ್ತೆಯಲ್ಲಿ ಮಗುಚಿಬಿದ್ದಿತ್ತು. ವಾಹನದ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ತಕ್ಷಣ ಆಸ್ಪತ್ರೆಗೆ ಕಳುಹಿಸಲಾಯಿತು.

ಬಳಿಕ ಅಪಘಾತಕ್ಕೀಡಾದ ವಾಹನವನ್ನು ರಸ್ತೆಯ ಬದಿಗೆ ತೆರವುಗೊಳಿಸಿ, ಇತರ ವಾಹನಗಳ ಸಂಚಾರಕ್ಕೆ ಅಡ್ಡಿಯಾಗದಂತೆ ಸಿಬ್ಬಂದಿ ಕ್ರಮ ಕೈಗೊಂಡರು.

ತುರ್ತು ಕರೆಗೆ ತಕ್ಷಣ ಸ್ಪಂದಿಸಿ ಗಾಯಾಳುವಿಗೆ ನೆರವಾಗುವುದರ ಜೊತೆಗೆ ಸಂಚಾರ ಸುಗಮಗೊಳಿಸಿದ ಎಎಸ್‌ಐ ಪ್ರಕಾಶ ಮೂಳೆ ಹಾಗೂ ಚಾಲಕ ಎಆರ್‌ಎಸ್‌ಐ ಶ್ರೀಕಾಂತ ಲಮಾಣಿ ಅವರ ಕರ್ತವ್ಯವನ್ನು ಪೊಲೀಸ್ ಇಲಾಖೆ ಅಭಿನಂದಿಸಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share