Friday, October 23, 2026
HomeCrimeಶಿರಸಿ | ಜಿ.ಪಂ ಕಚೇರಿಯಲ್ಲಿ ಲಂಚದ ಆರೋಪ: ಲೋಕಾಯುಕ್ತ ದಾಳಿ

ಶಿರಸಿ | ಜಿ.ಪಂ ಕಚೇರಿಯಲ್ಲಿ ಲಂಚದ ಆರೋಪ: ಲೋಕಾಯುಕ್ತ ದಾಳಿ

ಶಿರಸಿ: ಗುತ್ತಿಗೆ ಕಾಮಗಾರಿಯ ಬಿಲ್ ಪಾವತಿಗೆ ಸಂಬಂಧಿಸಿದಂತೆ 10 ಸಾವಿರ ರೂ. ಲಂಚ ಸ್ವೀಕರಿಸಿದ ಆರೋಪದ ಹಿನ್ನೆಲೆಯಲ್ಲಿ ಶಿರಸಿ ಜಿಲ್ಲಾ ಪಂಚಾಯಿತಿ ವಿಭಾಗೀಯ ಕಚೇರಿಯ ಲೆಕ್ಕಪರಿಶೋಧಕ ಮಲ್ಲಿಕಾರ್ಜುನ ಪಾಟೀಲ್ ಅವರ ವಿರುದ್ಧ ಲೋಕಾಯುಕ್ತ ಪೊಲೀಸರು ಬುಧವಾರ ಸಂಜೆ ಕಾರ್ಯಾಚರಣೆ ನಡೆಸಿದ್ದಾರೆ.

ಮುಂಡಗೋಡಿನ ಗುತ್ತಿಗೆದಾರ ನಾಗರಾಜ ಕಟ್ಟಿಮನಿ ಅವರಿಂದ ಗುತ್ತಿಗೆ ಕೆಲಸದ ಬಿಲ್ ಮಾಡಿಕೊಡಲು 10 ಸಾವಿರ ರೂ. ಲಂಚ ಕೇಳಲಾಗಿತ್ತು ಎಂದು ಆರೋಪಿಸಲಾಗಿದೆ. ಈ ಹಣವನ್ನು ನೀಡುವ ಸಂದರ್ಭದಲ್ಲಿ ಶಿರಸಿ ಜಿ.ಪಂ ಕಚೇರಿಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದು, ಮಲ್ಲಿಕಾರ್ಜುನ ಪಾಟೀಲ್ ಅವರನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಡಿವೈಎಸ್ಪಿ ಧನ್ಯಾ ನಾಯಕ್ ಹಾಗೂ ಸಿಪಿಐ ರವಿ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ. ಪ್ರಕರಣದ ಕುರಿತು ತನಿಖೆ ಮುಂದುವರಿದಿದೆ.

ಇದೇ ವೇಳೆ, ಸಂಬಂಧಿತ ಅಧಿಕಾರಿಯ ವಿರುದ್ಧ ಗುತ್ತಿಗೆದಾರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಸರ್ಕಾರಿ ಕಚೇರಿಗಳಲ್ಲಿ ಲಂಚದ ಆರೋಪಗಳು ಮರುಕಳಿಸದಂತೆ ಕ್ರಮ ಕೈಗೊಳ್ಳಬೇಕು ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇತ್ತೀಚಿನ ದಿನಗಳಲ್ಲಿ ಗುತ್ತಿಗೆ ಹಣ ಪಾವತಿಯಾಗದ ಹಿನ್ನೆಲೆಯಲ್ಲಿ ನ್ಯಾಯಾಲಯದಿಂದ ಶಿರಸಿ ಜಿ.ಪಂ ಕಚೇರಿಯ ಜಪ್ತಿಗೆ ಆದೇಶವಾಗಿತ್ತು ಎಂಬ ಮಾಹಿತಿಯೂ ಇದೆ. ಇದೇ ವಿಭಾಗೀಯ ಕಚೇರಿಯಲ್ಲಿ ಹಿಂದೆಯೂ ಲೋಕಾಯುಕ್ತ ದಾಳಿಗಳು ನಡೆದಿದ್ದವು ಎನ್ನಲಾಗಿದ್ದು, ಈ ಹಿಂದಿನ ಘಟನೆಗಳ ವಿವರಗಳನ್ನು ಅಧಿಕೃತವಾಗಿ ದೃಢಪಡಿಸಬೇಕಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share