Thursday, October 22, 2026
HomeLocal Newsಯಾಣಕ್ಕೆ 40 ಕಿ.ಮೀ. ಸುತ್ತಾಟ ತಪ್ಪಿಸುವ ರಸ್ತೆ ಅಭಿವೃದ್ಧಿಗೆ ಒಪ್ಪಿಗೆ

ಯಾಣಕ್ಕೆ 40 ಕಿ.ಮೀ. ಸುತ್ತಾಟ ತಪ್ಪಿಸುವ ರಸ್ತೆ ಅಭಿವೃದ್ಧಿಗೆ ಒಪ್ಪಿಗೆ

ಶಿರಸಿ: ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಯಾಣಕ್ಕೆ ತೆರಳುವ ಪ್ರವಾಸಿಗರ ಹೆಚ್ಚುವರಿ ಪ್ರಯಾಣದ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ ಇಡಲಾಗಿದೆ. ಯಾಣ ಗ್ರಾಮದ ಕುಮಟಾ ರಸ್ತೆಯಿಂದ ವಡ್ಡಿ ಗ್ರಾಮದ ರಸ್ತೆಗೆ ಸಂಪರ್ಕ ಕಲ್ಪಿಸುವ 2.4 ಕಿ.ಮೀ. ಉದ್ದದ ಕೂಡುರಸ್ತೆ ಅಭಿವೃದ್ಧಿಗೆ ವಿಧಾನಸಭೆಯ ಅರ್ಜಿ ಸಮಿತಿಯಲ್ಲಿ ಅನುಮೋದನೆ ನೀಡಲು ತೀರ್ಮಾನಿಸಿದೆ.

ಸಿರ್ಸಿ-ಕುಮಟಾ ಮಾರ್ಗದಲ್ಲಿ ಸಂಚರಿಸುವ ಪ್ರವಾಸಿಗರು ಯಾಣಕ್ಕೆ ಭೇಟಿ ನೀಡಿ ಬಳಿಕ ಮತ್ತೊಂದು ಕಡೆಗೆ ತೆರಳಲು ಸೂಕ್ತ ಸಂಪರ್ಕ ರಸ್ತೆ ಇಲ್ಲದ ಕಾರಣ ಸುಮಾರು 40 ಕಿ.ಮೀ. ಹೆಚ್ಚುವರಿ ಪ್ರಯಾಣ ಮಾಡಬೇಕಿದೆ. ಇದರಿಂದ ಪ್ರಯಾಣದ ಸಮಯ ಹಾಗೂ ಇಂಧನ ವ್ಯಯವಾಗುತ್ತಿದೆ.

ಈ ಸಮಸ್ಯೆ ಪರಿಹರಿಸಲು ಯಾಣ ಗ್ರಾಮದ ಕುಮಟಾ ರಸ್ತೆಯಿಂದ ವಡ್ಡಿ ಗ್ರಾಮದ ರಸ್ತೆಗೆ ಸಂಪರ್ಕ ಕಲ್ಪಿಸುವ ಕೂಡುರಸ್ತೆಯನ್ನು ಅಭಿವೃದ್ಧಿಪಡಿಸಬೇಕೆಂದು ಸ್ಥಳೀಯರು ಶಾಸಕ ಹಾಗೂ ವಿಧಾನಸಭೆಯ ಅರ್ಜಿ ಸಮಿತಿ ಸದಸ್ಯ ಭೀಮಣ್ಣ ನಾಯ್ಕ ಅವರಿಗೆ ಮನವಿ ಸಲ್ಲಿಸಿದ್ದರು.

ಸ್ಥಳೀಯರ ಮನವಿಯನ್ನು ಪರಿಗಣಿಸಿದ ಭೀಮಣ್ಣ ನಾಯ್ಕ ಅವರು ವಿಧಾನಸಭೆಯ ಅರ್ಜಿ ಸಮಿತಿಯ ಸಭೆಯಲ್ಲಿ ಈ ವಿಷಯ ಪ್ರಸ್ತಾಪಿಸಿ, ರಸ್ತೆ ಅಭಿವೃದ್ಧಿಯ ಅಗತ್ಯವನ್ನು ಸರ್ಕಾರದ ಗಮನಕ್ಕೆ ತಂದಿದ್ದರು. ಇದೀಗ ರಸ್ತೆ ಅಭಿವೃದ್ಧಿಗೆ ಅನುಮೋದನೆ ನೀಡಲು ಸಮಿತಿ ತೀರ್ಮಾನಿಸಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಈ ರಸ್ತೆ ಅಭಿವೃದ್ಧಿಯಾದಲ್ಲಿ ಪ್ರವಾಸಿಗರ ಹೆಚ್ಚುವರಿ ಪ್ರಯಾಣ ಕಡಿಮೆಯಾಗುವುದರ ಜೊತೆಗೆ ಸಮಯ ಮತ್ತು ಇಂಧನ ಉಳಿತಾಯವಾಗಲಿದೆ. ಸುತ್ತಮುತ್ತಲಿನ ಗ್ರಾಮಗಳ ರಸ್ತೆ ಸಂಪರ್ಕ ಸುಧಾರಣೆಗೂ ಅನುಕೂಲವಾಗಲಿದ್ದು, ಯಾಣ ಪ್ರವಾಸೋದ್ಯಮಕ್ಕೆ ಉತ್ತೇಜನ ದೊರೆಯುವ ಸಾಧ್ಯತೆಯಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share