ಮುಂಡಗೋಡ: ಪಟ್ಟಣದ ಗಣಪತಿ ದೇವಾಲಯದ ಸಭಾಂಗಣದಲ್ಲಿ ಕೆಪಿಸಿಸಿ ಸದಸ್ಯ ವಿವೇಕ್ ಹೆಬ್ಬಾರ್ ಅವರ ನೇತೃತ್ವದಲ್ಲಿ ಗುರುವಾರ ‘ಸಂಘಟನ ಸೃಜನ ಅಭಿಯಾನ–2’ ಸಭೆ ನಡೆಯಿತು.
ಕಾರ್ಯಕ್ರಮವನ್ನು ಗಣ್ಯರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಬಳಿಕ ಅಭಿಯಾನದ ವೀಕ್ಷಕರಾದ ವಿಜಯ ಡಿಸೋಜಾ ಮತ್ತು ಡಾ. ರಾಘವೇಂದ್ರ ಅವರೊಂದಿಗೆ ವಿವೇಕ್ ಹೆಬ್ಬಾರ್ ಅವರು ಅಭಿಯಾನದ ಉದ್ದೇಶ, ರೂಪುರೇಷೆಗಳು ಹಾಗೂ ಪಕ್ಷ ಸಂಘಟನೆಯನ್ನು ಬಲಪಡಿಸಲು ಕೈಗೊಳ್ಳಬೇಕಾದ ಕಾರ್ಯಚಟುವಟಿಕೆಗಳ ಕುರಿತು ವಿವರಿಸಿದರು.
ಸಭೆಯಲ್ಲಿ ಹಿರಿಯರಾದ ಎಚ್.ಎಂ. ನಾಯ್ಕ, ಮುಂಡಗೋಡ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣ ಹಿರೇಹಳ್ಳಿ, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜ್ಞಾನೇಶ್ವರ ಗುಡಿಯಾಳ, ಎನ್.ಎಂ. ದುಂಡಶಿ, ರವಿಗೌಡ ಪಾಟೀಲ್, ರಾಮಕೃಷ್ಣ ಮೂಲಿಮನಿ, ಹಿಂದುಳಿದ ವರ್ಗಗಳ ವಿಭಾಗದ ತಾಲೂಕು ಅಧ್ಯಕ್ಷ ದೇವು ಪಾಟೀಲ್, ಸಾಮಾಜಿಕ ಜಾಲತಾಣ ವಿಭಾಗದ ಅಧ್ಯಕ್ಷ ಧರ್ಮರಾಜ ನಡಿಗೆರ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಶಾರದಾ ರಾಠೋಡ, ಸಲ್ಮಾ ಶೇರಖಾನೆ, ಯುವ ಕಾಂಗ್ರೆಸ್ ಅಧ್ಯಕ್ಷ ರಾಜು ಕುಟ್ರಿ ಸೇರಿದಂತೆ ಪಕ್ಷದ ವಿವಿಧ ಹಂತಗಳ ಪದಾಧಿಕಾರಿಗಳು ಹಾಗೂ ಮುಖಂಡರು ಉಪಸ್ಥಿತರಿದ್ದರು.


