Friday, October 23, 2026
HomeLocal Newsಪೌಷ್ಟಿಕ ಆಹಾರವೇ ಆರೋಗ್ಯದ ಬುನಾದಿ

ಪೌಷ್ಟಿಕ ಆಹಾರವೇ ಆರೋಗ್ಯದ ಬುನಾದಿ

ಬನವಾಸಿ: ರಾಷ್ಟ್ರೀಯ ಪೋಷಣಾ ಅಭಿಯಾನದ ಅಂಗವಾಗಿ ಬನವಾಸಿ ಗ್ರಾಮ ಪಂಚಾಯಿತಿ ಸಭಾಭವನದಲ್ಲಿ ಶುಕ್ರವಾರ ಪೋಷಣ ಮಾಸಾಚರಣೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮಕ್ಕೆ ಚಾಲನೆ ನೀಡಿದ ವಲಯ ಮೇಲ್ವಿಚಾರಕಿ ಶಾರದಾ ಕಬ್ಬೇರ ಮಾತನಾಡಿ, ಮಕ್ಕಳಲ್ಲಿ ಅಪೌಷ್ಟಿಕತೆ ನಿವಾರಿಸುವುದು, ಗರ್ಭಿಣಿಯರು ಮತ್ತು ಬಾಣಂತಿಯರ ಆರೋಗ್ಯ ಕಾಪಾಡುವುದು ಹಾಗೂ ಪೌಷ್ಟಿಕ ಆಹಾರದ ಮಹತ್ವದ ಕುರಿತು ಜನಜಾಗೃತಿ ಮೂಡಿಸುವುದು ಅಭಿಯಾನದ ಪ್ರಮುಖ ಉದ್ದೇಶವಾಗಿದೆ ಎಂದರು.

ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಪೌಷ್ಟಿಕ ಆಹಾರ ಅತ್ಯಗತ್ಯ. ಗರ್ಭಿಣಿಯರು, ಬಾಣಂತಿಯರು ಹಾಗೂ ಆರು ವರ್ಷದೊಳಗಿನ ಮಕ್ಕಳ ಪೌಷ್ಟಿಕ ಸ್ಥಿತಿ ಸುಧಾರಿಸಲು ಪೂರಕ ಪೌಷ್ಟಿಕ ಆಹಾರ ಮತ್ತು ಆರೋಗ್ಯದ ಕುರಿತು ಅರಿವು ಮೂಡಿಸುವ ಕಾರ್ಯಗಳಿಗೆ ಆದ್ಯತೆ ನೀಡಬೇಕು.

ಪೌಷ್ಟಿಕ ಆಹಾರ ಪದ್ಧತಿ, ವೈಯಕ್ತಿಕ ಸ್ವಚ್ಛತೆ, ಮಕ್ಕಳ ಆರೋಗ್ಯ ಮತ್ತು ಅಪೌಷ್ಟಿಕತೆ ತಡೆಗಟ್ಟುವ ಕುರಿತು ಪೋಷಣಾ ಮಾಸಾಚರಣೆಯ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಪೌಷ್ಟಿಕ ಆಹಾರಗಳ ಪ್ರದರ್ಶನ ಏರ್ಪಡಿಸಲಾಗಿತ್ತು. ಗರ್ಭಿಣಿಯರಿಗೆ ಸೀಮಂತ ಕಾರ್ಯಕ್ರಮ, ಮೂರು ವರ್ಷದ ಮಗುವಿಗೆ ಸ್ವಾಗತ ಹಾಗೂ ಆರು ವರ್ಷ ಪೂರ್ಣಗೊಳಿಸಿದ ಮಗುವಿಗೆ ಅನ್ನಪ್ರಾಶನ ನೆರವೇರಿಸಲಾಯಿತು.

ಬನವಾಸಿ ವಲಯದ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share