Thursday, October 22, 2026
HomeLocal Newsತಿಗಣಿ ಗಂಗಾ ಪರಮೇಶ್ವರಿ ದೇವಸ್ಥಾನಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ ನೆರವು

ತಿಗಣಿ ಗಂಗಾ ಪರಮೇಶ್ವರಿ ದೇವಸ್ಥಾನಕ್ಕೆ ಧರ್ಮಸ್ಥಳ ಸಂಘದಿಂದ 1 ಲಕ್ಷ ರೂ ನೆರವು

ಬನವಾಸಿ: ಸಮೀಪದ ತಿಗಣಿ ಗ್ರಾಮದ ಶ್ರೀ ಗಂಗಾ ಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 1 ಲಕ್ಷ ರೂ ಆರ್ಥಿಕ ನೆರವು ನೀಡಲಾಗಿದೆ.

ಯೋಜನೆಯ ವತಿಯಿಂದ ಮಂಜೂರಾದ ನೆರವಿನ ಚೆಕ್‌ ಅನ್ನು ಯೋಜನಾಧಿಕಾರಿ ಮಂಜುನಾಥ ಎಸ್.ಜಿ. ಹಾಗೂ ಅಖಿಲ ಕರ್ನಾಟಕ ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಧೀರ ನಾಯರ್ ಅವರು ಭಾನುವಾರ ದೇವಸ್ಥಾನದ ಪ್ರತಿನಿಧಿಗಳಿಗೆ ವಿತರಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಯೋಜನಾಧಿಕಾರಿ ಮಂಜುನಾಥ ಎಸ್.ಜಿ., ಧಾರ್ಮಿಕ ಶ್ರದ್ಧಾಕೇಂದ್ರಗಳ ಅಭಿವೃದ್ಧಿ ಮತ್ತು ಸಂರಕ್ಷಣೆಯ ಮೂಲಕ ಭಾರತೀಯ ಸಂಸ್ಕೃತಿ ಹಾಗೂ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಮಹತ್ವದ ಪಾತ್ರ ವಹಿಸುತ್ತಿದೆ ಎಂದರು. ದೇವಸ್ಥಾನಗಳು ಧಾರ್ಮಿಕ ಆಚರಣೆಗಳ ಕೇಂದ್ರಗಳಾಗಿರುವುದರ ಜತೆಗೆ ಗ್ರಾಮೀಣ ಜನರ ನಂಬಿಕೆ, ಭಕ್ತಿ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರತೀಕಗಳಾಗಿವೆ ಎಂದು ತಿಳಿಸಿದರು.

ಜಿಲ್ಲಾ ಜನಜಾಗೃತಿ ವೇದಿಕೆಯ ಜಿಲ್ಲಾ ಉಪಾಧ್ಯಕ್ಷ ಸುಧೀರ ನಾಯರ್ ಮಾತನಾಡಿ, ಶ್ರದ್ಧಾಕೇಂದ್ರಗಳ ಅಭಿವೃದ್ಧಿಗೆ ನೆರವು ನೀಡುವುದರ ಜತೆಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಲವು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದು ಸಂತಸದ ಸಂಗತಿ ಎಂದರು.

ಮಾರಿಕಾಂಬಾ ದೇವಸ್ಥಾನದ ಅಧ್ಯಕ್ಷ ಪ್ರದೀಪ ಗೌಡ ಮಾತನಾಡಿ, ಗಂಗಾ ಪರಮೇಶ್ವರಿ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಧರ್ಮಸ್ಥಳದಿಂದ ದೊರೆತ ಆರ್ಥಿಕ ನೆರವು ಗ್ರಾಮಸ್ಥರಲ್ಲಿ ಸಂತಸ ಮೂಡಿಸಿದೆ. ದೇವಸ್ಥಾನದ ಅಭಿವೃದ್ಧಿ ಕಾರ್ಯಕ್ಕೆ ಈ ನೆರವು ಸಹಕಾರಿಯಾಗಲಿದೆ ಎಂದು ಆಶಿಸಿದರು.

ಈ ಸಂದರ್ಭದಲ್ಲಿ ಹಾಲು ಡೈರಿಯ ಅಧ್ಯಕ್ಷ ಅರುಣ್ ಗೌಡ, ಕಾರ್ಯದರ್ಶಿ ಆಶಾ ಗೌಡ, ಒಕ್ಕೂಟದ ಅಧ್ಯಕ್ಷ ಸುನೀಲ್ ಗೌಡ, ಗಂಗಾ ಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಚನ್ನಬಸಪ್ಪ ಕಬ್ಬೇರ, ಉಪಾಧ್ಯಕ್ಷ ನಾಗೇಂದ್ರ ಕಬ್ಬೇರ, ಖಜಾಂಚಿ ಶಂಕರ ಕಬ್ಬೇರ ಹಾಗೂ ಮಾರಿಕಾಂಬಾ ದೇವಸ್ಥಾನದ ಉಪಾಧ್ಯಕ್ಷ ಸದಾನಂದ ಚನ್ನಯ್ಯ ಉಪಸ್ಥಿತರಿದ್ದರು.

ವಲಯ ಮೇಲ್ವಿಚಾರಕಿ ಸುನಂದಾ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ಸೇವಾ ಪ್ರತಿನಿಧಿ ಸವಿತಾ ಸ್ವಾಗತಿಸಿ, ವಂದಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share