Thursday, October 22, 2026
HomeCrimeಮಳಗಿ ಬಳಿ ಆಟೋ–ಬೈಕ್ ಅಪಘಾತ: ಮೂವರಿಗೆ ಗಾಯ

ಮಳಗಿ ಬಳಿ ಆಟೋ–ಬೈಕ್ ಅಪಘಾತ: ಮೂವರಿಗೆ ಗಾಯ

ಮುಂಡಗೋಡ: ತಾಲೂಕಿನ ಮಳಗಿ ಗ್ರಾಮದ ಪಂಚವಟಿ ನವೋದಯ ಶಾಲೆಯ ಸಮೀಪ ಆಟೋ ರಿಕ್ಷಾ ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಬೈಕ್ ಸವಾರ, ಹಿಂಬದಿ ಸವಾರ ಹಾಗೂ ಆಟೋದಲ್ಲಿದ್ದ ಮಹಿಳೆ ಗಾಯಗೊಂಡಿದ್ದಾರೆ.

ಅ. 18ರಂದು ರಾತ್ರಿ ಸುಮಾರು 8.15ರ ವೇಳೆಗೆ ಹುಬ್ಬಳ್ಳಿ–ಶಿರಸಿ ರಾಜ್ಯ ಹೆದ್ದಾರಿ 69ರಲ್ಲಿ ಈ ಅಪಘಾತ ಸಂಭವಿಸಿದೆ. ಶಿರಸಿ ಕಡೆಗೆ ತೆರಳುತ್ತಿದ್ದ ಬೈಕ್‌ಗೆ ಆಟೋ ರಿಕ್ಷಾ ಡಿಕ್ಕಿ ಹೊಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಆಟೋ ಚಾಲಕ ತಬ್ರೇಜ್ ಶೇಖ್ (29) ಅತಿವೇಗ ಮತ್ತು ನಿರ್ಲಕ್ಷ್ಯದಿಂದ ಆಟೋ ಚಲಾಯಿಸಿ ಬೈಕ್‌ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಮುಂಡೇಬೈಲ್‌ನ ದಿನೇಶ ಪೂಜಾರಿ (30) ಮುಂಡಗೋಡ ಪೊಲೀಸ್ ಠಾಣೆಗೆ ನೀಡಿದ ದೂರಿನಲ್ಲಿ ಆರೋಪಿಸಿದ್ದಾರೆ.

ಅಪಘಾತದಲ್ಲಿ ಬೈಕ್ ಸವಾರ ಶ್ರೀಧರ ಪೂಜಾರಿ ಅವರ ತಲೆ ಮತ್ತು ಮುಖಕ್ಕೆ ಗಂಭೀರ ಗಾಯಗಳಾಗಿದ್ದು, ಬೈಕ್‌ನ ಹಿಂಬದಿ ಸವಾರ ಕೋಸ್ತಾ ಲುದ್ರಿಂಗ್ ಅವರ ಬಲಗಾಲಿಗೆ ಗಂಭೀರ ಗಾಯವಾಗಿದೆ. ಆಟೋದಲ್ಲಿದ್ದ ದ್ಯಾಮಕ್ಕ ಎಂಬ ಮಹಿಳೆಗೂ ಸಣ್ಣಪುಟ್ಟ ಗಾಯಗಳಾಗಿವೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಕುರಿತು ಮುಂಡಗೋಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share