ಯಲ್ಲಾಪುರ: ತಾಲೂಕಿನ ಚಂದಗುಳಿ ಗ್ರಾ.ಪಂ ವ್ಯಾಪ್ತಿಯ ಬಿಲ್ಲಿಗದ್ದೆಯಲ್ಲಿ ಆಯೋಜಿಸಿದ್ದ ಶಾರದೋತ್ಸವ ವಿಜೃಂಭಣೆಯಿಂದ ನೆರವೇರಿತು. ಕಾರ್ಯಕ್ರಮದ ಅಂಗವಾಗಿ ನಡೆದ ಸಭಾ ಕಾರ್ಯಕ್ರಮದಲ್ಲಿ ಊರಿನ ಹಿರಿಯರು ಹಾಗೂ ಸಾಧಕರನ್ನು ಗೌರವಿಸಿ ಸನ್ಮಾನಿಸಲಾಯಿತು.
ಊರಿನ ಹಿರಿಯರಾದ ಗೋಪಾಲ ಪಟಗಾರ, ಹಿರಿಯ ಕೃಷಿಕರಾದ ಎಲ್.ಪಿ. ಭಟ್ ಗುಂಡ್ಕಲ್, ರಾಜ್ಯ ಪ್ರಶಸ್ತಿ ಪುರಸ್ಕೃತ ಶಿಕ್ಷಕ ರಾಮಚಂದ್ರ ನಾಯಕ್ ಹಾಗೂ ಮಾರುತಿ ದೇವಸ್ಥಾನದ ಅರ್ಚಕ ನಾರಾಯಣ ಭಟ್ ಅವರನ್ನು ಸನ್ಮಾನಿಸಲಾಯಿತು. ಎಲ್.ಪಿ. ಭಟ್ ಗುಂಡ್ಕಲ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಾಗರಾಜ ಕವಡಿಕೇರಿ ಕಾರ್ಯಕ್ರಮ ಉದ್ಘಾಟಿಸಿದರು.
ಸಭೆಯಲ್ಲಿ ಸುಬ್ಬಣ್ಣ ಉದ್ದಾಬೈಲ, ಊರಿನ ಪ್ರಮುಖರಾದ ಶಶಿಧರ ಹೆಗಡೆ, ಗೋಪಾಲ ಭಾಗ್ವತ್, ಆರ್.ಎಸ್. ಹೆಗಡೆ ಬಿಲ್ಲಿಗದ್ದೆ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಊರಿನ ಜನರು ಒಗ್ಗಟ್ಟಿನಿಂದ ಹಬ್ಬವನ್ನು ಅತ್ಯುತ್ತಮವಾಗಿ ಆಚರಿಸುತ್ತಿರುವುದು ಸಂತಸ ತಂದಿದ್ದು, ಇಂತಹ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಇದೇ ರೀತಿ ಮುಂದುವರಿಯಲಿ ಎಂದು ಸಭೆಯಲ್ಲಿ ಆಶಯ ವ್ಯಕ್ತವಾಯಿತು. ಪೂಜಾ ಮಂಟಪಕ್ಕೆ ವಿಶ್ವದರ್ಶನ ಶಿಕ್ಷಣ ಸಂಸ್ಥೆಯ ಅಧ್ಯಕ್ಷ, ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಭೇಟಿ ನೀಡಿ ಶ್ರೀ ದೇವರ ದರ್ಶನಾಶೀರ್ವಾದ ಪಡೆದರು.