Thursday, October 22, 2026
HomeLocal Newsಭಕ್ತರ ಸಮರ್ಪಣೆಯೇ ಮಠದ ಪರಂಪರೆಯ ಜೀವಾಳ: ಸ್ವರ್ಣವಲ್ಲೀ ಶ್ರೀ

ಭಕ್ತರ ಸಮರ್ಪಣೆಯೇ ಮಠದ ಪರಂಪರೆಯ ಜೀವಾಳ: ಸ್ವರ್ಣವಲ್ಲೀ ಶ್ರೀ

ಶಿರಸಿ: ಮಠದ ಧಾರ್ಮಿಕ ಆಚರಣೆಗಳು ಮತ್ತು ಉತ್ಸವಗಳು ನಿರಂತರವಾಗಿ ನಡೆದುಕೊಂಡು ಬರಲು ಭಕ್ತರ ಪಾಲ್ಗೊಳ್ಳುವಿಕೆ ಮುಖ್ಯವಾಗಿದೆ. ಶರನ್ನವರಾತ್ರಿಯ ಸಂದರ್ಭದಲ್ಲಿ ದೂರದ ಊರುಗಳಿಂದ ಆಗಮಿಸಿದ ವೈದಿಕರು, ಭಕ್ತರು ಶ್ರದ್ಧಾಭಕ್ತಿಯಿಂದ ವಿವಿಧ ಸೇವೆಗಳಲ್ಲಿ ತೊಡಗಿಸಿಕೊಂಡಿರುವುದು ಈ ಸಮರ್ಪಣಾಭಾವಕ್ಕೆ ಸಾಕ್ಷಿ ಎಂದು ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು.

ಸ್ವರ್ಣವಲ್ಲೀ ಮಹಾಸಂಸ್ಥಾನದಲ್ಲಿ ವಿಜಯದಶಮಿಯ ಅಂಗವಾಗಿ ನಡೆದ ಆಶೀರ್ವಚನ ಕಾರ್ಯಕ್ರಮದಲ್ಲಿ ಮಾತನಾಡಿದ ಶ್ರೀಗಳು, ಒಂದು ಮಠದ ಪರಂಪರೆ ಕೇವಲ ಅದರ ಸಂಪತ್ತು, ವೈಭವ ಅಥವಾ ಪ್ರತಿಷ್ಠೆಯಿಂದ ಉಳಿಯುವುದಿಲ್ಲ. ಅದರ ಮೇಲೆ ಶಿಷ್ಯರು ಮತ್ತು ಭಕ್ತರು ಇಟ್ಟಿರುವ ಅಚಲವಾದ ನಂಬಿಕೆ, ಧರ್ಮದ ಮೇಲಿನ ಶ್ರದ್ಧೆ ಹಾಗೂ ಸೇವೆಯ ಮನೋಭಾವವೇ ಆ ಪರಂಪರೆಯನ್ನು ಮುನ್ನಡೆಸುತ್ತದೆ ಎಂದು ಶ್ರೀಗಳು ಹೇಳಿದರು.

ಇದೇ ಸಂದರ್ಭದಲ್ಲಿ ಬೇಡ್ತಿ-ವರದಾ ಹಾಗೂ ಅಘನಾಶಿನಿ ನದಿ ಜೋಡಣೆ ಯೋಜನೆಗಳ ಕುರಿತು ಪ್ರಸ್ತಾಪಿಸಿದ ಶ್ರೀಗಳು, ಇಂತಹ ಯೋಜನೆಗಳಿಂದ ಜನರು ಪದೇಪದೇ ಆತಂಕಕ್ಕೆ ಒಳಗಾಗುವ ಪರಿಸ್ಥಿತಿ ದೂರವಾಗಬೇಕು. ಈ ಭಾಗದ ಜನರಿಗೆ ಶಾಶ್ವತ ಪರಿಹಾರ ದೊರೆಯುವಂತಾಗಲಿ ಎಂದು ಜಗನ್ಮಾತೆಯಲ್ಲಿ ಪ್ರಾರ್ಥಿಸಿದರು.

ಸ್ವರ್ಣವಲ್ಲೀ ಮಠದಲ್ಲಿ ಶರನ್ನವರಾತ್ರಿಯ ಅಂಗವಾಗಿ ಒಂಬತ್ತು ದಿನಗಳ ಕಾಲ ರಾಜರಾಜೇಶ್ವರಿ ದೇವಿಗೆ ಶ್ರೀಚಕ್ರಾರ್ಚನೆ, ಚಂಡಿಕಾ ಸಪ್ತಶತಿ, ದೇವಿ ಭಾಗವತ, ವೇದ ಪಾರಾಯಣ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆದವು.

ವಿಜಯದಶಮಿಯಂದು ವಿದ್ಯಾರಂಭ, ಸೀಮೋಲ್ಲಂಘನ, ಶಮೀಪೂಜೆ, ಅಷ್ಟಾವಧಾನ ಸೇವೆ ಹಾಗೂ ಮಹಾಪೂಜೆ ನೆರವೇರಿದವು. ಮಠದ ಕಿರಿಯ ಶ್ರೀಗಳಾದ ಆನಂದಬೋಧೇಂದ್ರ ಸರಸ್ವತೀ ಮಹಾಸ್ವಾಮೀಜಿ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಮಠದ ಕಾರ್ಯಾಧ್ಯಕ್ಷ ಸತೀಶ ಗಜಾನನ ಹುಳಗೋಳ, ನಿಕಟಪೂರ್ವ ಅಧ್ಯಕ್ಷ ವಿ.ಎನ್. ಹೆಗಡೆ ಬೊಮ್ಮನಳ್ಳಿ, ಸೀತಾರಾಮ ಹೆಗಡೆ, ಮಹಾದೇವ ಹೆಗಡೆ ಗಡೀಕೈ ಮುಂತಾದವರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share