Thursday, October 22, 2026
HomeLocal Newsಬೇಡ್ತಿ ತಿರುವಿಗೆ ಭಾವನೆಯಲ್ಲ, ವಿಜ್ಞಾನವೇ ಆಧಾರವಾಗಲಿ: ಎಚ್.ಕೆ. ಪಾಟೀಲ

ಬೇಡ್ತಿ ತಿರುವಿಗೆ ಭಾವನೆಯಲ್ಲ, ವಿಜ್ಞಾನವೇ ಆಧಾರವಾಗಲಿ: ಎಚ್.ಕೆ. ಪಾಟೀಲ

ಶಿರಸಿ: ನದಿ ಜೋಡಣೆ ಯೋಜನೆಯ ವಿಚಾರದಲ್ಲಿ ಜನರು ಬೀದಿಗಿಳಿದು ಹೋರಾಟ ನಡೆಸುವ ಪರಿಸ್ಥಿತಿ ಎದುರಾಗುವ ಮೊದಲೇ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸಾರ್ವಜನಿಕರೊಂದಿಗೆ ಮುಕ್ತ ಸಮಾಲೋಚನೆ ನಡೆಸಬೇಕು. ಜನರ ಹಿತಾಸಕ್ತಿ ಮತ್ತು ಪರಿಸರದ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ನಿರ್ಧಾರ ಕೈಗೊಳ್ಳಬೇಕು ಎಂದು ಮಾಜಿ ಸಚಿವ, ಗದಗ ಶಾಸಕ ಎಚ್.ಕೆ. ಪಾಟೀಲ ಅಭಿಪ್ರಾಯಪಟ್ಟರು.

ಶಿರಸಿಯ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬೇಡ್ತಿ ನದಿ ತಿರುವು ಯೋಜನೆಯ ಕುರಿತು ಭಾವನಾತ್ಮಕ ನಿಲುವುಗಳ ಬದಲಿಗೆ ವೈಜ್ಞಾನಿಕ ವಿಶ್ಲೇಷಣೆಗೆ ಆದ್ಯತೆ ನೀಡಬೇಕು. ಯೋಜನೆಯ ಸಾಧಕ-ಬಾಧಕಗಳನ್ನು ಸಮಗ್ರವಾಗಿ ಪರಿಶೀಲಿಸಿ, ಸಾರ್ವಜನಿಕ ಚರ್ಚೆಗೆ ಅವಕಾಶ ಕಲ್ಪಿಸಿದ ಬಳಿಕವೇ ಮುಂದಿನ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ಯಾವುದೇ ನದಿಯ ನೀರನ್ನು ವರ್ಷದ ಎಲ್ಲ ತಿಂಗಳುಗಳಲ್ಲೂ ನಿರಂತರವಾಗಿ ತಿರುಗಿಸಲು ಸಾಧ್ಯವಿಲ್ಲ. ಮಳೆಗಾಲದಲ್ಲಿ ಸಮುದ್ರ ಸೇರುವ ಹೆಚ್ಚುವರಿ ನೀರನ್ನು ಬಳಸಿಕೊಳ್ಳುವ ಸಾಧ್ಯತೆಗಳ ಬಗ್ಗೆ ಅಧ್ಯಯನ ನಡೆಸಿ, ಸಮಗ್ರ ಯೋಜನಾ ವರದಿಯನ್ನು ಸಿದ್ಧಪಡಿಸಬೇಕು. ಆ ವರದಿಯನ್ನು ಸಾರ್ವಜನಿಕವಾಗಿ ಬಹಿರಂಗಪಡಿಸಿ, ಜನರ ಅಭಿಪ್ರಾಯಗಳಿಗೆ ಅವಕಾಶ ನೀಡಬೇಕು ಎಂದು ಅವರು ಹೇಳಿದರು.

ವಿದ್ಯುತ್ ಉತ್ಪಾದನೆಯೊಂದನ್ನೇ ಇಂತಹ ಯೋಜನೆಗಳ ಉದ್ದೇಶವನ್ನಾಗಿ ನೋಡುವ ಬದಲು, ಸೌರ ಮತ್ತು ಪವನ ಶಕ್ತಿಯಂತಹ ಪರ್ಯಾಯ ನವೀಕರಿಸಬಹುದಾದ ಇಂಧನ ಮೂಲಗಳ ಲಭ್ಯತೆಯನ್ನೂ ಪರಿಗಣಿಸಬೇಕು. ಕುಡಿಯುವ ನೀರಿನ ಅಗತ್ಯ ಮತ್ತು ಪರಿಸರ ಸಂರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡುವುದು ಇಂದಿನ ಅಗತ್ಯವಾಗಿದೆ ಎಂದು ತಿಳಿಸಿದರು.

ಬೇಡ್ತಿ ನದಿ ತಿರುವಿನಿಂದ ಉತ್ತರ ಕನ್ನಡ ಜಿಲ್ಲೆಯ ಅರಣ್ಯ ಪ್ರದೇಶಗಳು, ವನ್ಯಜೀವಿಗಳು ಮತ್ತು ಸಸ್ಯ ಸಂಪತ್ತಿನ ಮೇಲೆ ಉಂಟಾಗಬಹುದಾದ ಪರಿಣಾಮಗಳನ್ನು ಸಮಗ್ರವಾಗಿ ಅಧ್ಯಯನ ಮಾಡಬೇಕು. ಜಿಲ್ಲೆಯ ಜನರ ಕುಡಿಯುವ ನೀರಿನ ಅಗತ್ಯಕ್ಕೆ ಧಕ್ಕೆಯಾಗದಂತೆ ಎಚ್ಚರಿಕೆ ವಹಿಸಬೇಕು ಎಂದು ಪಾಟೀಲ ಅಭಿಪ್ರಾಯಪಟ್ಟರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share