Thursday, October 22, 2026
HomeCrimeಕುಮಟಾ | ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ: ಇಬ್ಬರಿಗೆ ಗಾಯ

ಕುಮಟಾ | ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಅಪಘಾತ: ಇಬ್ಬರಿಗೆ ಗಾಯ

ಕುಮಟಾ: ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ಹೋಗಿ ಬೈಕ್ ಸ್ಕಿಡ್ ಆಗಿ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಗಾಯಗೊಂಡ ಘಟನೆ ತಾಲೂಕಿನ ಹೊಳೆಗದ್ದೆ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ.

ಹೊನ್ನಾವರ ತಾಲೂಕಿನ ಮಂಕಿ ಗ್ರಾಮದ, ಸಿವಿಲ್ ಇಂಜಿನಿಯರ್ ಆಗಿ ಕೆಲಸ ಮಾಡುವ ನವೀನ್ ಮೋಹನ ನಾಯ್ಕ (26) ಬೈಕ್ ಚಲಾಯಿಸುತ್ತಿದ್ದರು. ಬೈಕ್‌ನ ಹಿಂಬದಿಯಲ್ಲಿ ಅದೇ ಗ್ರಾಮದ ನಿತಿನ್ ಮೋಹನ ನಾಯ್ಕ (23) ಕುಳಿತಿದ್ದರು.

ಅ. 9ರಂದು ಸಂಜೆ 4.30ರ ಸುಮಾರಿಗೆ ಹೊನ್ನಾವರ ಕಡೆಯಿಂದ ಗೋಕರ್ಣದ ಕಡೆಗೆ ತೆರಳುತ್ತಿದ್ದಾಗ ಹೊಳೆಗದ್ದೆ ಕ್ರಾಸ್ ಬಳಿ ರಸ್ತೆಗೆ ಅಡ್ಡ ಬಂದ ನಾಯಿಯನ್ನು ತಪ್ಪಿಸಲು ನವೀನ್ ಬ್ರೇಕ್ ಹಾಕಿದ್ದಾರೆ. ಈ ವೇಳೆ ಬೈಕ್ ಸ್ಕಿಡ್ ಆಗಿ ಇಬ್ಬರೂ ರಸ್ತೆಯ ಮೇಲೆ ಬಿದ್ದಿದ್ದಾರೆ ಎನ್ನಲಾಗಿದೆ.

ಅಪಘಾತದಲ್ಲಿ ಹಿಂಬದಿ ಸೀಟಿನಲ್ಲಿ ಕುಳಿತಿದ್ದ ನಿತಿನ್ ಅವರ ತಲೆಗೆ ಗಾಯವಾಗಿದ್ದು, ಎಡಭುಜದ ಮೂಳೆ ಮುರಿದಿದೆ. ಬೈಕ್ ಸವಾರ ನವೀನ್ ಅವರಿಗೂ ಎಡಭಾಗ, ಬಲಗಾಲಿನ ಪಾದ ಹಾಗೂ ತಲೆಗೆ ಗಾಯಗಳಾಗಿವೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ನಿತಿನ್ ಅವರು ಅ. 22ರಂದು ಕುಮಟಾ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share