ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಮಧ್ಯಾಹ್ನ 12 ಗಂಟೆಯವರೆಗೆ ಶೇ. 29.65ರಷ್ಟು ಮತದಾನವಾಗಿದೆ.
ಜಿಲ್ಲೆಯಲ್ಲಿ ಒಟ್ಟು 16,039 ಮತದಾರರು ನೋಂದಾಯಿಸಿಕೊಂಡಿದ್ದು, ಮಧ್ಯಾಹ್ನದ ವೇಳೆಗೆ 4,756 ಮಂದಿ ಮತ ಚಲಾಯಿಸಿದ್ದಾರೆ. ಇವರಲ್ಲಿ 2,485 ಪುರುಷರು ಹಾಗೂ 2,271 ಮಹಿಳಾ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ.
ಬೆಳಿಗ್ಗೆ 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ. 10.82ರಷ್ಟು ಮತದಾನವಾಗಿತ್ತು. ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಸರತಿಯಲ್ಲಿ ನಿಂತು ಮತ ಚಲಾಯಿಸಿದರು.


