Ad
Ad
Ad
Home Local News ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ; ಜಿಲ್ಲೆಯಲ್ಲಿ ಶೇ.76.52 ಮತದಾನ

ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆ; ಜಿಲ್ಲೆಯಲ್ಲಿ ಶೇ.76.52 ಮತದಾನ

0
3

ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಶೇ.76.52ರಷ್ಟು ಮತದಾನವಾಗಿದ್ದು, ಯಾವುದೇ ಅಹಿತಕರ ಘಟನೆಗಳಿಲ್ಲದೆ ಚುನಾವಣೆ ಶಾಂತಿಯುತವಾಗಿ ಮುಕ್ತಾಯಗೊಂಡಿದೆ.

Ad

ಶುಕ್ರವಾರ ಬೆಳಗ್ಗೆ 8ರಿಂದ ಸಂಜೆ 4ರವರೆಗೆ ಮತದಾನ ನಡೆದಿದ್ದು, ಬಿಸಿಲು-ಮಳೆಯನ್ನೂ ಲೆಕ್ಕಿಸದೆ ಮತದಾರರು ಉತ್ಸಾಹದಿಂದ ಮತಗಟ್ಟೆಗಳಿಗೆ ಆಗಮಿಸಿ ತಮ್ಮ ಹಕ್ಕು ಚಲಾಯಿಸಿದರು. ಹಲವು ಮತಗಟ್ಟೆಗಳಲ್ಲಿ ಮತದಾರರು ಸರದಿಯಲ್ಲಿ ನಿಂತು ಮತದಾನ ಮಾಡಿದರು.

ಕಾರವಾರದ ಸೈಂಟ್ ಮೈಕಲ್ ಶಾಲೆಯ ಮತಗಟ್ಟೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮಿಪ್ರಿಯಾ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಅಪರ ಜಿಲ್ಲಾಧಿಕಾರಿ ಸಾಜಿದ್ ಮುಲ್ಲಾ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಹಾಗೂ ತಹಸೀಲ್ದಾರ್ ನಿಶ್ಚಲ್ ನರೋನ್ಹ ಅವರು ಸಾರ್ವಜನಿಕರೊಂದಿಗೆ ಸರದಿಯಲ್ಲಿ ನಿಂತು ಮತ ಚಲಾಯಿಸಿದರು.

ಬೆಳಗ್ಗೆ 10 ಗಂಟೆಯ ವೇಳೆಗೆ ಜಿಲ್ಲೆಯಲ್ಲಿ ಶೇ.10.82ರಷ್ಟು ಮತದಾನವಾಗಿತ್ತು. ಅಂಕೋಲಾ ತಹಸೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದು, ಮಧ್ಯಾಹ್ನ 12 ಗಂಟೆಯ ವೇಳೆಗೆ ಕಚೇರಿಯ ಆವರಣದ ಹೊರಗೂ ಸರದಿ ಸಾಲು ಕಂಡುಬಂದಿತು. ಕುಮಟಾ ತಹಸೀಲ್ದಾರ್ ಕಚೇರಿಯ ಮತಗಟ್ಟೆಯಲ್ಲಿಯೂ ಮತದಾರರು ಹೆಚ್ಚಿನ ಸಂಖ್ಯೆಯಲ್ಲಿ ಸೇರಿದ್ದರು.

ಮಧ್ಯಾಹ್ನ 12 ಗಂಟೆಯ ವೇಳೆಗೆ ಶೇ.29.65ರಷ್ಟು ಮತದಾನ ದಾಖಲಾಗಿತ್ತು. ಆಗ ಒಟ್ಟು 16,039 ಮತದಾರರಲ್ಲಿ 2,485 ಪುರುಷರು ಮತ್ತು 2,271 ಮಹಿಳೆಯರು ಸೇರಿ 4,756 ಮಂದಿ ಮತ ಚಲಾಯಿಸಿದ್ದರು.

ಮಧ್ಯಾಹ್ನ 2 ಗಂಟೆಯ ವೇಳೆಗೆ ಮತದಾನದ ಪ್ರಮಾಣ ಶೇ.52.09ಕ್ಕೆ ಏರಿಕೆಯಾಗಿತ್ತು. ಈ ವೇಳೆಗೆ 4,310 ಪುರುಷರು ಹಾಗೂ 4,045 ಮಹಿಳೆಯರು ಸೇರಿ ಒಟ್ಟು 8,355 ಮಂದಿ ಮತದಾನ ಮಾಡಿದ್ದರು.

ವಿಶೇಷ ಚೇತನ ಮತದಾರರ ಅನುಕೂಲಕ್ಕಾಗಿ ಗಾಲಿಕುರ್ಚಿ ವ್ಯವಸ್ಥೆ ಮಾಡಲಾಗಿತ್ತು. ಮತದಾರರಿಗೆ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲಾಗಿದ್ದು, ತುರ್ತು ವೈದ್ಯಕೀಯ ನೆರವು ಒದಗಿಸಲು ವೈದ್ಯಕೀಯ ಸಿಬ್ಬಂದಿಯನ್ನೂ ನಿಯೋಜಿಸಲಾಗಿತ್ತು.

ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ವರದಿಯಾಗದೆ ಮತದಾನ ಪ್ರಕ್ರಿಯೆ ಸುಗಮವಾಗಿ ಪೂರ್ಣಗೊಂಡಿತು.

NO COMMENTS

LEAVE A REPLY

Please enter your comment!
Please enter your name here

error: Content is protected !!