Saturday, October 24, 2026
HomeCrimeಶಿರಸಿ | ಮನೆಯಲ್ಲೇ ಚಿರತೆಯ 10 ಉಗುರುಗಳು ಪತ್ತೆ: ವ್ಯಕ್ತಿ ಬಂಧನ!

ಶಿರಸಿ | ಮನೆಯಲ್ಲೇ ಚಿರತೆಯ 10 ಉಗುರುಗಳು ಪತ್ತೆ: ವ್ಯಕ್ತಿ ಬಂಧನ!

ಶಿರಸಿ: ತಾಲೂಕಿನ ಕಲ್ಲಿ ಗ್ರಾಮದ ಮನೆಯಲ್ಲಿ ಅಕ್ರಮವಾಗಿ ಚಿರತೆಯ 10 ಉಗುರುಗಳನ್ನು ಕಿತ್ತು ಸಂಗ್ರಹಿಸಿಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಇಲಾಖೆ ಲಕ್ಷ್ಮಣ ಶೇಷಪ್ಪ ನಾಯ್ಕ ಎಂಬಾತನನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ.

2026ರ ಅಕ್ಟೋಬರ್ 22ರಂದು ಶಿರಸಿ ತಾಲೂಕಿನ ಕಲ್ಲಿ ಗ್ರಾಮದ ಅರಣ್ಯ ಸರ್ವೆ ನಂ. 80ರ ವ್ಯಾಪ್ತಿಯಲ್ಲಿರುವ ಲಕ್ಷ್ಮಣ ಶೇಷಪ್ಪ ನಾಯ್ಕ ತನ್ನ ಮನೆಯಲ್ಲಿ ಅನಧಿಕೃತವಾಗಿ ಚಿರತೆಯ ಉಗುರುಗಳನ್ನು ಸಂಗ್ರಹಿಸಿಟ್ಟಿರುವ ಬಗ್ಗೆ ಅರಣ್ಯ ಇಲಾಖೆಗೆ ಖಚಿತ ಮಾಹಿತಿ ಲಭಿಸಿತ್ತು.

ಈ ಮಾಹಿತಿ ಆಧರಿಸಿ ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು ಮನೆಯಲ್ಲಿ ಸಂಗ್ರಹಿಸಿಟ್ಟಿದ್ದ ಚಿರತೆಯ 10 ಉಗುರುಗಳನ್ನು ಪತ್ತೆಹಚ್ಚಿದ್ದಾರೆ.

ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಸೆಕ್ಷನ್ 9 ಮತ್ತು 39ರ ಉಲ್ಲಂಘನೆ ಹಾಗೂ ಸಂಬಂಧಿತ ಇತರ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಆರೋಪಿ ಉಂಬಳೆಕೊಪ್ಪ ಗ್ರಾಮದ ಲಕ್ಷ್ಮಣ ಶೇಷಪ್ಪ ನಾಯ್ಕನನ್ನು ಶಿರಸಿಯ ಹೆಚ್ಚುವರಿ ಜೆಎಂಎಫ್‌ಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

ಶಿರಸಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಯೋಗೇಶ ಸಿ.ಕೆ. (ಪ್ರಭಾರ) ಹಾಗೂ ಶಿರಸಿ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅಮಿತ್ ಚವ್ಹಾಣ ಅವರ ಮಾರ್ಗದರ್ಶನದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಬನವಾಸಿ ವಲಯದ ವಲಯ ಅರಣ್ಯಾಧಿಕಾರಿ ಕಾರ್ತಿಕ್ ಕಂಬಳಿ ಅವರ ನೇತೃತ್ವದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಕೈಗೊಂಡಿದ್ದರು.

ಸುಗಾವಿ ಅರಣ್ಯ ಶಾಖೆಯ ಉಪ ವಲಯ ಅರಣ್ಯಾಧಿಕಾರಿ ಪ್ರೆಮ ಕುಮಾರ್ ಕಾರಭಾರಿ, ಗೋಳಿಕಟ್ಟಾ ವಲಯದ ಗಸ್ತು ಅರಣ್ಯ ಪಾಲಕ ಸಂತೋಷ ಕಕ್ಕಳಮೇಲಿ ಮತ್ತು ಸುಗಾವಿ ಗಸ್ತು ಅರಣ್ಯ ಪಾಲಕ ರವಿ ಜಾಡರ, ಕ್ಷೇಮಾಭಿವೃದ್ಧಿ ದಿನಗೂಲಿ ನೌಕರ ಎಚ್.ಎಸ್ ಈಶ್ವರಪ್ಪ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share