Saturday, October 24, 2026
HomeLocal Newsಯಲ್ಲಾಪುರ | ಪ್ರಗತಿ ವಿದ್ಯಾಲಯದ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯಲ್ಲಾಪುರ | ಪ್ರಗತಿ ವಿದ್ಯಾಲಯದ ಕ್ರೀಡಾಪಟುಗಳು ರಾಜ್ಯಮಟ್ಟಕ್ಕೆ ಆಯ್ಕೆ

ಯಲ್ಲಾಪುರ: ಜಿಲ್ಲಾ ಮಟ್ಟದ ಇಲಾಖಾ ಕ್ರೀಡಾಕೂಟದಲ್ಲಿ ಉತ್ತಮ ಪ್ರದರ್ಶನ ನೀಡಿದ ತಾಲೂಕಿನ ಭರತನಹಳ್ಳಿಯ ಪ್ರಗತಿ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ.

14 ವರ್ಷ ವಯೋಮಿತಿಯೊಳಗಿನ ವಿಭಾಗದ ಉದ್ದ ಜಿಗಿತ ಸ್ಪರ್ಧೆಯಲ್ಲಿ ತನು ಉದಯ ದೇವಾಡಿಗ ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಅರ್ಹತೆ ಗಳಿಸಿದ್ದಾಳೆ. 17 ವರ್ಷ ವಯೋಮಿತಿಯೊಳಗಿನ ವಿದ್ಯಾರ್ಥಿಗಳ ವಿಭಾಗದ 100 ಮೀಟರ್ ಓಟದಲ್ಲಿ ಸಂಗಮ್ ನಾಯ್ಕ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾನೆ.

SCODWES ಸಂಸ್ಥೆಯ ವತಿಯಿಂದ ಸಂತೋಷ್ ಸಾಲೇರ್ ಅವರು ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಿದ್ದರು. ಜಿಲ್ಲಾ ಮಟ್ಟದಲ್ಲಿ ಗಮನಾರ್ಹ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಪ್ರಗತಿ ಶಿಕ್ಷಣ ಅಭಿವೃದ್ಧಿ ಸಂಸ್ಥೆಯ ಸರ್ವ ಸದಸ್ಯರು ಹಾಗೂ ಸಿಬ್ಬಂದಿ ಅಭಿನಂದನೆ ಸಲ್ಲಿಸಿದ್ದು, ರಾಜ್ಯಮಟ್ಟದ ಸ್ಪರ್ಧೆಯಲ್ಲೂ ಉತ್ತಮ ಪ್ರದರ್ಶನ ನೀಡಿ ಯಶಸ್ಸು ಗಳಿಸಲಿ ಎಂದು ಶುಭ ಹಾರೈಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share