Saturday, October 24, 2026
HomeLocal Newsಬೇಡ್ತಿ-ಅಘನಾಶಿನಿ ಉಳಿವಿನ ಹೋರಾಟಕ್ಕೆ ಎಲ್ಲರೂ ಕೈಜೋಡಿಸಿ: ನಾರಾಯಣ ಭಟ್ ಅಗ್ಗಾಶಿಕುಂಬ್ರಿ

ಬೇಡ್ತಿ-ಅಘನಾಶಿನಿ ಉಳಿವಿನ ಹೋರಾಟಕ್ಕೆ ಎಲ್ಲರೂ ಕೈಜೋಡಿಸಿ: ನಾರಾಯಣ ಭಟ್ ಅಗ್ಗಾಶಿಕುಂಬ್ರಿ

ಅಂಕೋಲಾ: ನದಿ ಜೋಡಣೆಯಿಂದ ಯಾರಿಗೂ ಏನೂ ಆಗುವುದಿಲ್ಲ ಎಂಬ ಮನೋಭಾವ ಬಿಟ್ಟು, ನಮ್ಮೆಲ್ಲರಿಗಾಗಿ, ನಮ್ಮ ಸಮಾಜಕ್ಕಾಗಿ ಹಾಗೂ ನಮ್ಮ ಉತ್ತರ ಕನ್ನಡಕ್ಕಾಗಿ ಹೋರಾಡುವ ಸಂದರ್ಭ ಬಂದಿದೆ. ನದಿ ಜೋಡಣೆ ಯೋಜನೆಯನ್ನು ವಿರೋಧಿಸಿ ನವೆಂಬರ್ 3ರಂದು ನಡೆಯಲಿರುವ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ನಮ್ಮದೇ ಕಾರ್ಯಕ್ರಮವಾಗಿದ್ದು, ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹಾಗೂ ರಾಷ್ಟ್ರೀಯ ಹೆದ್ದಾರಿ ತಡೆ ಸಂಚಾಲನಾ ಸಮಿತಿಯ ಅಧ್ಯಕ್ಷ ನಾರಾಯಣ ಭಟ್ ಅಗ್ಗಾಶಿಕುಂಬ್ರಿ ಕರೆ ನೀಡಿದರು.

ನವೆಂಬರ್ 3ರಂದು ಯಲ್ಲಾಪುರದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ತಡೆಯ ಹಿನ್ನೆಲೆಯಲ್ಲಿ ಅಂಕೋಲಾ ತಾಲೂಕಿನ ಡೊಂಗ್ರಿ, ಸುಂಕಸಾಳ, ಅಚವೆ ಹಾಗೂ ಹಿಲ್ಲೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜನಸಂಪರ್ಕ ಸಭೆಯಲ್ಲಿ ಅವರು ಮಾತನಾಡಿದರು..

ಸಂಚಾಲಕ ರಾಘವೇಂದ್ರ ಭಟ್ ಹಾಸಣಗಿ ಮಾತನಾಡಿ, ಸಭೆಯಲ್ಲಿ ಪಾಲ್ಗೊಂಡಿರುವ ವಿವಿಧ ಭಾಗಗಳ ಪ್ರಮುಖರು ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕರೆತಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.

ಬೇಡ್ತಿ-ಅಘನಾಶಿನಿ ಕೊಳ್ಳ ಸಮಿತಿಯ ಕಾರ್ಯದರ್ಶಿ ನರಸಿಂಹ ಸಾತೋಡ್ಡಿ ರಸ್ತೆ ತಡೆ ಕಾರ್ಯಕ್ರಮದ ಕುರಿತು ಸಂಪೂರ್ಣ ಮಾಹಿತಿ ನೀಡಿದರು. ಹಿಂದೆ ಬೇಡ್ತಿ ಜಲವಿದ್ಯುತ್‌ ಯೋಜನೆ ವಿರೋಧಿ ಹೋರಾಟದಲ್ಲಿ ಪಾಲ್ಗೊಂಡಿದ್ದ ಹಿರಿಯ ಸಮಾಜಸೇವಕ ಗಿರೀಶ್ ಭಟ್ ಕೋನಾಳ ಅವರು ಹಿಂದಿನ ಹೋರಾಟದ ಅನುಭವಗಳನ್ನು ಹಂಚಿಕೊಂಡು, ಯುವಜನರೂ ಸೇರಿದಂತೆ ಎಲ್ಲರೂ ಹೋರಾಟದಲ್ಲಿ ಕೈಜೋಡಿಸುವಂತೆ ಕರೆ ನೀಡಿದರು.

ಸಂಚಾಲನಾ ಸಮಿತಿಯ ಸಂಚಾಲಕರಾದ ಸಂತೋಷ್ ಭಟ್ ಮಳಲಗಾಂವ ಹಾಗೂ ರಾಘವೇಂದ್ರ ಭಟ್ ಸುಂಕಸಾಳ ಮಾತನಾಡಿ, ಹೆಚ್ಚಿನ ಸಂಖ್ಯೆಯಲ್ಲಿ ಜನರನ್ನು ಕಾರ್ಯಕ್ರಮಕ್ಕೆ ಕರೆತರುವುದಾಗಿ ತಿಳಿಸಿದರಲ್ಲದೆ, ಗಂಗಾವಳಿ ನದಿ ಈ ಭಾಗದ ಜನರಿಗೂ ಅತ್ಯಂತ ಅಗತ್ಯವಾಗಿದ್ದು, ಹೋರಾಟದ ಮಹತ್ವವನ್ನು ಎಲ್ಲರೂ ಅರಿತುಕೊಳ್ಳಬೇಕು ಎಂದು ಹೇಳಿದರು.

ಚಿನ್ನಾಪುರ ಭಾಗದ ಪ್ರತಿನಿಧಿ ನಾರಾಯಣ ಭಟ್ ಬಟ್ಲಗುಂಡಿ ಅವರು, ಹೆಚ್ಚಿನ ಸಂಖ್ಯೆಯಲ್ಲಿ ಈ ಭಾಗದ ಸಾವರ್ಜನಿಕರು ಭಾಗವಹಿಸುವಂತೆ ಮನವಿ ಮಾಡಿದರು.

ಹವ್ಯಕ ಜಾಗೃತ ಪಡೆಯ ಕುಳಿನಾಡು ಸೀಮೆಯ ಸಂಚಾಲಕ ಮಂಜುನಾಥ್ ಗಾಂವ್ಕರ್ ಸ್ವಾಗತಿಸಿದರು. ಕೇಂದ್ರ ಹವ್ಯಕ ಜಾಗೃತ ಪಡೆಯ ಪ್ರಶಾಂತ್ ಹೆಗ್ಗಾರ ವಂದಿಸಿದರು. ಸಭೆಯಲ್ಲಿ ಸ್ಥಳೀಯ ಪ್ರಮುಖರು, ಸಹಕಾರಿ ಸಂಘಗಳ ನಿರ್ದೇಶಕರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share