Monday, September 7, 2026
Join WhatsApp Group
HomeStateಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಪೋಕ್ಸೊ ಪ್ರಕರಣ

ಯಾದಗಿರಿ: ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಗೋಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಠ ಸ್ಥಾಪಿಸಿಕೊಂಡಿರುವ ಸ್ವಯಂಘೋಷಿತ ದೇವಮಾನವ ಮಲ್ಲಿಕಾರ್ಜುನ ಮುತ್ಯಾ ವಿರುದ್ಧ ಅಪ್ರಾಪ್ತ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದ ಆರೋಪದಡಿ ಪ್ರಕರಣ ದಾಖಲಾಗಿದೆ.

ಉತ್ತರ ಕರ್ನಾಟಕ ಭಾಗದಲ್ಲಿ ಪರಿಚಿತರಾಗಿರುವ ಮುತ್ಯಾ, ಯಾದಗಿರಿ, ಕಲಬುರಗಿ, ರಾಯಚೂರು, ವಿಜಯಪುರ ಸೇರಿದಂತೆ ಪಕ್ಕದ ತೆಲಂಗಾಣದ ಕೆಲ ಜಿಲ್ಲೆಗಳಲ್ಲೂ ತಮ್ಮ ಭಕ್ತರನ್ನು ಹೊಂದಿದ್ದಾರೆ.

ಇತ್ತೀಚೆಗೆ ಹರಿದಾಡುತ್ತಿರುವ ಒಂದು ವಿಡಿಯೋದಲ್ಲಿ ಬಾಲಕಿಯೊಂದಿಗೆ ಅನುಚಿತವಾಗಿ ವರ್ತಿಸಿದಂತೆ ಕಾಣುವ ದೃಶ್ಯಗಳು ಹೊರಬಂದಿದ್ದು, ಇದರಿಂದ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಪ್ರಕರಣ ಗಂಭೀರ ಸ್ವರೂಪ ಪಡೆಯುತ್ತಿದ್ದಂತೆ ಮಕ್ಕಳ ಹಕ್ಕುಗಳ ಆಯೋಗ ಸ್ವಯಂಪ್ರೇರಿತವಾಗಿ ದೂರು ದಾಖಲಿಸಿಕೊಂಡು ತನಿಖೆಗೆ ಮುಂದಾಗಿದೆ.

ಆಯೋಗದ ನಿರ್ದೇಶನದ ಮೇರೆಗೆ ಯಾದಗಿರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಸೂಚಿಸಲಾಗಿದೆ. ಪೊಲೀಸರು ತಕ್ಷಣವೇ ಪೋಕ್ಸೊ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಪ್ರಕರಣ ದಾಖಲಾಗುತ್ತಿದ್ದಂತೆ ಮುತ್ಯಾ ನಾಪತ್ತೆಯಾಗಿರುವ ಮಾಹಿತಿ ಲಭ್ಯವಾಗಿದ್ದು, ಅವರನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳು ಶೋಧ ಕಾರ್ಯಾಚರಣೆ ನಡೆಸುತ್ತಿವೆ. ಮುತ್ಯಾ ಪರವಾಗಿ ಕೆಲವರು ಬೆಂಬಲ ವ್ಯಕ್ತಪಡಿಸುತ್ತಿರುವುದು ಗಮನಾರ್ಹ.

ಇದರ ಮಧ್ಯೆಯೇ ಅಜ್ಞಾತ ಸ್ಥಳದಿಂದ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿರುವ ಮುತ್ಯಾ, ತಮ್ಮ ಮೇಲೆ ಬಂದಿರುವ ಆರೋಪಗಳನ್ನು ತಳ್ಳಿ ಹಾಕಿದ್ದು, ಪೊಲೀಸರು ಯಾವಾಗ ಕರೆಯುತ್ತಾರೋ ಆಗ ತನಿಖೆಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share