Monday, October 26, 2026
HomeLocal Newsಮಹರ್ಷಿ ವಾಲ್ಮೀಕಿಯವರ ಬದುಕು ಯುವಜನರಿಗೆ ಪ್ರೇರಣೆಯಾಗಲಿ

ಮಹರ್ಷಿ ವಾಲ್ಮೀಕಿಯವರ ಬದುಕು ಯುವಜನರಿಗೆ ಪ್ರೇರಣೆಯಾಗಲಿ

ಕಾರವಾರ: ಶಿಕ್ಷಣ ಮತ್ತು ಜ್ಞಾನದ ಮೂಲಕ ಉನ್ನತ ಸಾಧನೆ ಮಾಡಲು ಸಾಧ್ಯ ಎಂಬುದನ್ನು ಆದಿಕವಿ ಮಹರ್ಷಿ ವಾಲ್ಮೀಕಿ ತಮ್ಮ ಬದುಕಿನ ಮೂಲಕ ತೋರಿಸಿಕೊಟ್ಟಿದ್ದಾರೆ. ಅವರ ಜೀವನ ಮತ್ತು ಸಂದೇಶಗಳು ಯುವಜನರಿಗೆ ಪ್ರೇರಣೆಯಾಗಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ ಹೇಳಿದರು.

ನಗರದ ದೈವಜ್ಞ ಭವನದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ನಗರಸಭೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ವಾಲ್ಮೀಕಿ ಅವರು ಬದುಕಿನ ಅನುಭವಗಳಿಂದ ಪರಿವರ್ತನೆ ಹೊಂದಿ, ತಪಸ್ಸು ಮತ್ತು ಜ್ಞಾನಾರ್ಜನೆಯ ಮೂಲಕ ಆದಿಕವಿಯಾಗಿ ಬೆಳೆದರು. ತಾವು ಗಳಿಸಿದ ಜ್ಞಾನವನ್ನು ಸಮಾಜದ ಒಳಿತಿಗಾಗಿ ಬಳಸಿದರು. ವೈಯಕ್ತಿಕ ಬೆಳವಣಿಗೆಯ ಜತೆಗೆ ಸಮಾಜದ ಅಭಿವೃದ್ಧಿಗೂ ಪ್ರತಿಯೊಬ್ಬರೂ ಕೊಡುಗೆ ನೀಡಬೇಕು ಎಂಬುದು ಅವರ ಬದುಕಿನ ಸಂದೇಶವಾಗಿದೆ ಎಂದರು.

ಮಹರ್ಷಿ ವಾಲ್ಮೀಕಿ ಕುರಿತು ಉಪನ್ಯಾಸ ನೀಡಿದ ಶಿವಾಜಿ ವಿದ್ಯಾಮಂದಿರದ ಮುಖ್ಯಾಧ್ಯಾಪಕ ಹಾಗೂ ಸಾಹಿತಿ ಡಾ. ಗಣೇಶ್ ಎಸ್. ಬಿಷ್ಟಣ್ಣನವರ, ವಾಲ್ಮೀಕಿಯ ಮೂಲ ಹೆಸರು ರತ್ನಾಕರ. ತಮ್ಮ ಬದುಕಿನ ಒಂದು ಹಂತದಲ್ಲಿ ದಾರಿ ತಪ್ಪಿದ್ದ ಅವರು ನಾರದ ಮುನಿಗಳ ಮಾರ್ಗದರ್ಶನದಿಂದ ಮನಃಪರಿವರ್ತನೆ ಮಾಡಿಕೊಂಡು ಮಹರ್ಷಿಯಾದರು ಎಂದು ವಿವರಿಸಿದರು.

ಕಾರ್ಯಕ್ರಮದಲ್ಲಿ ಸಂವಿಧಾನದ ಪೀಠಿಕೆಯ ಪ್ರಮಾಣವಚನ ಸ್ವೀಕರಿಸಲಾಯಿತು. ಶೈಕ್ಷಣಿಕವಾಗಿ ಉತ್ತಮ ಸಾಧನೆ ಮಾಡಿದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಿಸಲಾಯಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ದೀಪನ್ ಎಂ.ಎನ್., ಜಿಲ್ಲಾ ಪಂಚಾಯಿತಿ ಮುಖ್ಯ ಯೋಜನಾಧಿಕಾರಿ ಸೋಮಶೇಖರ್ ಮೇಸ್ತಾ, ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿ ವೈ.ಕೆ. ಉಮೇಶ, ನಗರಸಭೆ ಪೌರಾಯುಕ್ತ ಜಗದೀಶ ಹುಲಗಜ್ಜಿ, ಡಿಡಿಪಿಐ ಲತಾ ನಾಯ್ಕ, ವಿವಿಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಸಂಘಟನೆಗಳ ಮುಖಂಡರಾದ ದೀಪಕ್ ಕುಡಾಳಕರ, ನಾಗರಾಜ ತಳವಾರ, ಎಲಿಷಾ ಎಲಕಪಾಟಿ, ಕಿರಣ ನಾರಾಯಣ, ತುಳಸಿದಾಸ ಪಾವಸ್ಕರ್ ಮತ್ತಿತರರು ಉಪಸ್ಥಿತರಿದ್ದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share