ಸಿದ್ದಾಪುರ: ಅನಂತಮೂರ್ತಿ ಹೆಗಡೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಹಮ್ಮಿಕೊಂಡಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದ ಸಮಾರೋಪದ ಅಂಗವಾಗಿ ಅ.27ರಂದು ತಾಲೂಕಿನ ಕುಚಗುಂಡಿಯ ಕಲ್ಯಾಣೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಸಾಮೂಹಿಕ ಸತ್ಯನಾರಾಯಣ ಪೂಜೆ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಆಯೋಜಿಸಲಾಗಿದೆ.
ಬೆಳಿಗ್ಗೆ 9 ಗಂಟೆಗೆ ನಡೆಯಲಿರುವ ಕಾರ್ಯಕ್ರಮದಲ್ಲಿ ಶಿರಳಗಿ ರಾಜಾರಾಮ ಕ್ಷೇತ್ರದ ಬ್ರಹ್ಮಾನಂದ ಭಾರತೀ ಶ್ರೀಗಳು ದಿವ್ಯ ಸಾನ್ನಿಧ್ಯ ವಹಿಸಲಿದ್ದು, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಉದ್ಘಾಟಿಸಲಿದ್ದಾರೆ. ಟ್ರಸ್ಟ್ ಅಧ್ಯಕ್ಷ ಅನಂತಮೂರ್ತಿ ಹೆಗಡೆ ಅಧ್ಯಕ್ಷತೆ ವಹಿಸಲಿದ್ದಾರೆ.
ಕಲ್ಯಾಣೇಶ್ವರ ದೇವಸ್ಥಾನದ ಅಧ್ಯಕ್ಷ ಸುಬ್ರಾಯ ಹೆಗಡೆ, ಹಸ್ರಗೋಡ ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಪ್ರದೀಪ ಹೆಗಡೆ ಕರ್ಜಗಿ, ಮಾಜಿ ಸದಸ್ಯ ಕೆರಿಯಾ ಗೌಡ ಹಾಗೂ ಬಿಜೆಪಿ ಮಹಾಶಕ್ತಿ ಕೇಂದ್ರದ ಪ್ರಮುಖ ಅಣ್ಣಪ್ಪ ಗೌಡ ಮುಖ್ಯ ಅತಿಥಿಗಳಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


