ಬೆಂಗಳೂರು: ಕರ್ನಾಟಕದಲ್ಲಿ ವಿಶೇಷ ಸಮಗ್ರ ಪರಿಷ್ಕರಣೆ (Special Intensive Revision – SIR) ಪ್ರಕ್ರಿಯೆಯ ಬಳಿಕ ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗಿದೆ. ಮತದಾರರು ತಮ್ಮ ಹೆಸರು ಪಟ್ಟಿಯಲ್ಲಿ ಇದೆಯೇ ಎಂಬುದನ್ನು ಪರಿಶೀಲಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯನ್ನು ಆನ್‌ಲೈನ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.
ಭಾರತದ ಚುನಾವಣಾ ಆಯೋಗದ ಅಧಿಕೃತ ವೆಬ್‌ಸೈಟ್‌ನಲ್ಲಿ ಕರ್ನಾಟಕದ ಮತದಾರರ ಪಟ್ಟಿ ಲಭ್ಯವಿದೆ. ಮತದಾರರು ಈ ಲಿಂಕ್‌ಗೆ ಭೇಟಿ ನೀಡಿ (https://voters.eci.gov.in/download-eroll?stateCode=S10) ರಾಜ್ಯ, ಜಿಲ್ಲೆ, ವಿಧಾನಸಭಾ ಕ್ಷೇತ್ರ ಸೇರಿದಂತೆ ಅಗತ್ಯ ವಿವರಗಳನ್ನು ಆಯ್ಕೆ ಮಾಡಿಕೊಂಡು ಮತದಾರರ ಪಟ್ಟಿಯ ಪಿಡಿಎಫ್ ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.
ವಿಶೇಷ ಸಮಗ್ರ ಪರಿಷ್ಕರಣೆ ಪ್ರಕ್ರಿಯೆಯ ಬಳಿಕ ಪ್ರಕಟಿಸಿರುವ ಅಂತಿಮ ಪಟ್ಟಿಯಲ್ಲಿ ತಮ್ಮ ಹೆಸರು ಸೇರ್ಪಡೆಯಾಗಿದೆಯೇ ಎಂಬುದನ್ನು ಮತದಾರರು ಖಚಿತಪಡಿಸಿಕೊಳ್ಳಬೇಕು. ಹೆಸರು, ವಿಳಾಸ ಹಾಗೂ ಇತರ ವಿವರಗಳಲ್ಲಿನ ತಪ್ಪುಗಳ ಬಗ್ಗೆಯೂ ಪರಿಶೀಲನೆ ನಡೆಸುವುದು ಮುಖ್ಯವಾಗಿದೆ. ಕುಟುಂಬದ ಸದಸ್ಯರ ಹೆಸರುಗಳನ್ನೂ ಪರಿಶೀಲಿಸಿಕೊಳ್ಳಬಹುದು.
ಪಟ್ಟಿಯಲ್ಲಿ ಹೆಸರು ಕಾಣಿಸದಿದ್ದರೆ ಅಥವಾ ವಿವರಗಳಲ್ಲಿ ತಪ್ಪುಗಳಿದ್ದರೆ ಸಂಬಂಧಪಟ್ಟ ಮತದಾರರ ನೋಂದಣಾಧಿಕಾರಿ ಅಥವಾ ಚುನಾವಣಾ ಅಧಿಕಾರಿಗಳನ್ನು ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆಯಬಹುದು.
ಮತದಾರರ ಪಟ್ಟಿ ಡೌನ್‌ಲೋಡ್ ಮಾಡಲು:


