Tuesday, October 27, 2026
HomeLocal Newsಭೂತಾಯಿಯ ಬಗ್ಗೆ ಕೃತಘ್ನತೆ ಬೇಡ: ಸ್ವರ್ಣವಲ್ಲೀ ಶ್ರೀ

ಭೂತಾಯಿಯ ಬಗ್ಗೆ ಕೃತಘ್ನತೆ ಬೇಡ: ಸ್ವರ್ಣವಲ್ಲೀ ಶ್ರೀ

ಯಲ್ಲಾಪುರ: ಭೂಮಿ ಬರೀ ಮಣ್ಣಿನ ಮುದ್ದೆಯಲ್ಲ, ಅದೊಂದು ದೇವತೆ. ನಿತ್ಯದ ಅನುಷ್ಠಾನದಲ್ಲಿ ಭೂತಾಯಿಗೆ ಮೊದಲ ಪೂಜೆ ಸಲ್ಲಿಸುತ್ತೇವೆ. ಆದರೆ, ಭೂತಾಯಿ ಜೀರ್ಣಿಸಿಕೊಳ್ಳಲಾಗದ ಪ್ಲಾಸ್ಟಿಕ್‌ಗಳನ್ನು ಎಸೆಯುವ ಮೂಲಕ ತಪ್ಪು ಮಾಡುತ್ತಿದ್ದೇವೆ. ಭೂತಾಯಿಯ ಬಗ್ಗೆ ಕೃತಘ್ನರಾಗಬಾರದು ಎಂದು ಸೋಂದಾ ಸ್ವರ್ಣವಲ್ಲೀ ಮಠದ ಶ್ರೀಮದ್ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮೀಜಿ ಹೇಳಿದರು.

ತಾಲೂಕಿನ ಆನಗೋಡ ಸೇವಾ ಸಹಕಾರಿ ಸಂಘದ ನೂತನ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ, ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಶ್ರೀಗಳು ಆಶೀರ್ವಚನ ನೀಡಿದರು.

ನಾವು ಇಂದು ಹಲವಾರು ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದೇವೆ. ಇಂತಹ ಕೆಲವು ಸಮಸ್ಯೆಗಳಿಗೆ ಸಹಕಾರಿ ಸಂಘಗಳು ಪರಿಹಾರ ಕಂಡುಕೊಳ್ಳಬಹುದು. ಸಂಸ್ಥೆಯೂ ಬೆಳೆದು, ಅದರೊಂದಿಗೆ ಸಮಾಜವನ್ನೂ ಬೆಳೆಸುವ ಪ್ರಯತ್ನ ನಡೆಯಬೇಕು ಎಂದು ಅವರು ತಿಳಿಸಿದರು.

ಬೇಡ್ತಿ–ಅಘನಾಶಿನಿ ನದಿ ತಿರುವು ಯೋಜನೆಯ ವಿರುದ್ಧ ನವೆಂಬರ್ 3ರಂದು ಯಲ್ಲಾಪುರದಲ್ಲಿ ಹಮ್ಮಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ತಡೆ ಹೋರಾಟ ಜನಬಲದ ಆಧಾರದಲ್ಲಿ ನಡೆಯಬೇಕು. ಹೋರಾಟ ಶಾಂತಿಯುತವಾಗಿರಬೇಕು ಎಂದು ಶ್ರೀಗಳು ಕರೆ ನೀಡಿದರು.

ಸಮಾರಂಭದಲ್ಲಿ ವಿಶ್ವದರ್ಶನ ಸಂಸ್ಥೆಯ ಅಧ್ಯಕ್ಷ ಹರಿಪ್ರಕಾಶ ಕೋಣೆಮನೆ ಉಪಸ್ಥಿತರಿದ್ದರು. ಸಂಕಲ್ಪ ಸಂಸ್ಥೆಯ ಪ್ರಮೋದ ಹೆಗಡೆ ಅವರು ದಿವಂಗತ ರಾಮಕೃಷ್ಣ ಹೆಗಡೆ ಅವರ ಭಾವಚಿತ್ರವನ್ನು ಅನಾವರಣಗೊಳಿಸಿದರು.

ಪ್ರಸಾದಿನಿ ಚಿಕ್ಯಾನಮನೆ ಪ್ರಾರ್ಥಿಸಿದರು. ಸಂಘದ ಉಪಾಧ್ಯಕ್ಷ ಗಣಪತಿ ಮಾನಿಗದ್ದೆ ಸ್ವಾಗತಿಸಿದರು. ಸಂಘದ ಅಧ್ಯಕ್ಷ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಮಹೇಶ ಭಟ್ಟ ಹಸರಪಾಲ್ ಕಾರ್ಯಕ್ರಮ ನಿರ್ವಹಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad

Most Popular

Recent Comments

error: Content is protected !!
Share