Ad
Ad
Home Local News ಪಶ್ಚಿಮ ಪದವೀಧರರ ಕ್ಷೇತ್ರ: ಸಂಕನೂರಗೆ 3,529 ಮತಗಳ ಮುನ್ನಡೆ

ಪಶ್ಚಿಮ ಪದವೀಧರರ ಕ್ಷೇತ್ರ: ಸಂಕನೂರಗೆ 3,529 ಮತಗಳ ಮುನ್ನಡೆ

0
3

ಧಾರವಾಡ/ಕಾರವಾರ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯ ಮತ ಎಣಿಕೆಯ ಎರಡನೇ ಸುತ್ತಿನಲ್ಲೂ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಎರಡನೇ ಸುತ್ತಿನಲ್ಲಿ ಎಣಿಕೆಯಾದ 14,000 ಮತಗಳ ಪೈಕಿ ಸಂಕನೂರ 6,161 ಮತಗಳನ್ನು ಪಡೆದರೆ, ಕಾಂಗ್ರೆಸ್ ಅಭ್ಯರ್ಥಿ ಮೋಹನ್ ಲಿಂಬಿಕಾಯಿ 4,697 ಮತಗಳನ್ನು ಪಡೆದಿದ್ದಾರೆ.

ಮೊದಲ ಎರಡು ಸುತ್ತುಗಳಲ್ಲಿ ಒಟ್ಟು 28,001 ಮತಗಳ ಎಣಿಕೆ ಪೂರ್ಣಗೊಂಡಿದ್ದು, ಸಂಕನೂರ 12,620 ಮತಗಳನ್ನು ಹಾಗೂ ಮೋಹನ್ ಲಿಂಬಿಕಾಯಿ 9,091 ಮತಗಳನ್ನು ಪಡೆದಿದ್ದಾರೆ. ಈ ಮೂಲಕ ಸಂಕನೂರ 3,529 ಮತಗಳ ಅಂತರದ ಮುನ್ನಡೆ ಸಾಧಿಸಿದ್ದಾರೆ.

Previous articleಕಲೆಯ ನಂಟು ನೆಮ್ಮದಿಯ ಬದುಕಿಗೆ ದಾರಿ: ಶ್ರೀ ಮಾರುತಿ ಗುರೂಜಿ
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

NO COMMENTS

LEAVE A REPLY

Please enter your comment!
Please enter your name here

error: Content is protected !!