ಧಾರವಾಡ: ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಕ್ಷೇತ್ರದ ದ್ವೈವಾರ್ಷಿಕ ಚುನಾವಣೆಯಲ್ಲಿ ಆಯ್ಕೆಯಾದ ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರ ಅವರಿಗೆ ಅ. 28ರಂದು ಪ್ರಮಾಣ ಪತ್ರ ವಿತರಿಸಲಾಯಿತು.
ಧಾರವಾಡದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಚುನಾವಣಾಧಿಕಾರಿ ಹಾಗೂ ಬೆಳಗಾವಿ ಪ್ರಾದೇಶಿಕ ಆಯುಕ್ತೆ ಕೆ.ಎಂ. ಜಾನಕಿ ಅವರು ಪ್ರಮಾಣ ಪತ್ರ ಹಸ್ತಾಂತರಿಸಿದರು.
ಈ ಸಂದರ್ಭದಲ್ಲಿ ಸಹಾಯಕ ಚುನಾವಣಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಹಾಗೂ ಹೆಚ್ಚುವರಿ ಪ್ರಾದೇಶಿಕ ಆಯುಕ್ತೆ ಗೀತಾ ಕವಲಗಿ ಉಪಸ್ಥಿತರಿದ್ದರು.


