ಕಾರವಾರ: ಕಾರವಾರ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಕ್ರಿಮ್ಸ್)ಯಲ್ಲಿ 2026-27ನೇ ಸಾಲಿನ ಬಿ.ಎಸ್ಸಿ ನರ್ಸಿಂಗ್ ಕೋರ್ಸ್ನ 100 ಸೀಟುಗಳ ಭರ್ತಿಗೆ ಅನುಮತಿ ದೊರೆತಿದ್ದು, ಅ.30ರಂದು ನೇರ ಪ್ರವೇಶ ಪ್ರಕ್ರಿಯೆ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಮೂಲಕ ನಡೆದ ಎಲ್ಲ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಉಳಿಕೆಯಾಗಿರುವ ಸೀಟುಗಳನ್ನು ಭರ್ತಿ ಮಾಡಿಕೊಳ್ಳಲು ಅನುಮತಿ ನೀಡಲಾಗಿದೆ. ಅದರಂತೆ ಕ್ರಿಮ್ಸ್ನಲ್ಲಿ ಲಭ್ಯವಿರುವ 100 ಸೀಟುಗಳಿಗೆ ಪ್ರವೇಶ ಕಲ್ಪಿಸಲಾಗುತ್ತಿದೆ.
ಅ.30ರಂದು ಬೆಳಿಗ್ಗೆ 9ರಿಂದ ಸಂಜೆ 5 ಗಂಟೆಯವರೆಗೆ ಕಾರವಾರ ವೈದ್ಯಕೀಯ ಕಾಲೇಜಿನ ಬೋಧನಾ ಕೊಠಡಿ-2ರಲ್ಲಿ ವಾಕ್-ಇನ್ ಪ್ರವೇಶ ಪ್ರಕ್ರಿಯೆ ನಡೆಯಲಿದೆ. ಕೆಇಎಯಲ್ಲಿ ನೋಂದಾಯಿಸಿಕೊಂಡಿರುವ ಅರ್ಹ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್ಸೈಟ್ krimskarwar.karnataka.gov.in ಸಂಪರ್ಕಿಸಬಹುದು.


