Thursday, October 29, 2026
HomeCrimeಸಿದ್ದಾಪುರ | ಮನೆಗೆ ನುಗ್ಗಿ 6.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

ಸಿದ್ದಾಪುರ | ಮನೆಗೆ ನುಗ್ಗಿ 6.34 ಲಕ್ಷ ರೂ ಮೌಲ್ಯದ ಚಿನ್ನಾಭರಣ ಕಳವು

ಸಿದ್ದಾಪುರ: ಮನೆಯ ಹಿಂಬದಿಯ ಗೋಡೆ ಹತ್ತಿ ಒಳನುಗ್ಗಿದ ಕಳ್ಳರು, ಬೀಗ ಹಾಕಿದ್ದ ಕಪಾಟಿನ ಸೇಫ್ ಲಾಕರ್ ತೆರೆದು ಚಿನ್ನಾಭರಣ ಹಾಗೂ ನಗದು ಕಳವು ಮಾಡಿರುವ ಘಟನೆ ತಾಲೂಕಿನ ಹೆಜನಿ ಗ್ರಾಮದ ಮಾವಿನಗುಂಡಿಯ ನೀಲಕಂಠ ನಾಯ್ಕ ಅವರ ಮನೆಯಲ್ಲಿ ನಡೆದಿದೆ.

ಅ. 28ರಂದು ಮಧ್ಯಾಹ್ನ 2ರಿಂದ 2.30ರ ನಡುವಿನ ಅವಧಿಯಲ್ಲಿ ಮೂವರು ಅಪರಿಚಿತರು ಮನೆಯ ಹಿಂಬದಿಯ ಗೋಡೆ ಹತ್ತಿ ಒಳಪ್ರವೇಶಿಸಿದ್ದಾರೆ. ಮನೆಯ ಹಾಲ್‌ನಲ್ಲಿದ್ದ ಗೋದ್ರೇಜ್ ಕಪಾಟಿನ ಬಾಗಿಲನ್ನು ಯಾವುದೋ ವಸ್ತುವಿನಿಂದ ಮೀಟಿ ತೆರೆದಿದ್ದಾರೆ. ಬಳಿಕ ಅದರೊಳಗಿದ್ದ ಸೇಫ್ ಲಾಕರ್‌ನ ಚಾವಿ ಬಳಸಿ ಲಾಕರ್ ತೆರೆದು ಚಿನ್ನಾಭರಣ ಹಾಗೂ ನಗದು ಹಣವನ್ನು ಕದ್ದೊಯ್ದಿದ್ದಾರೆ ಎನ್ನಲಾಗಿದೆ.

ಕಳವಾದ ವಸ್ತುಗಳಲ್ಲಿ 35 ಗ್ರಾಂ ತೂಕದ ಚಿನ್ನದ ತಾಳಿ ಸರ, 16 ಗ್ರಾಂ ತೂಕದ ಚಿನ್ನದ ಸರ ಹಾಗೂ 5 ಗ್ರಾಂ ತೂಕದ ಚಿನ್ನದ ಕಿವಿಯೋಲೆ ಲಾಕೆಟ್ ಸೇರಿವೆ. ಇವುಗಳ ಒಟ್ಟು ತೂಕ 56 ಗ್ರಾಂ ಆಗಿದ್ದು, ಅಂದಾಜು ಮೌಲ್ಯ ರೂ. 6.30 ಲಕ್ಷ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಇದರೊಂದಿಗೆ ರೂ. 4,000 ನಗದು ಹಣವನ್ನೂ ಕಳವು ಮಾಡಲಾಗಿದೆ. ಒಟ್ಟು ಕಳವಾದ ಸೊತ್ತುಗಳ ಅಂದಾಜು ಮೌಲ್ಯ ರೂ. 6.34 ಲಕ್ಷವಾಗಿದೆ.ಮೂವರು ಆರೋಪಿಗಳು ಹಳದಿ ಬಣ್ಣದ ಬೈಕ್‌ನಲ್ಲಿ ಬಂದಿದ್ದರು ಎನ್ನಲಾಗಿದ್ದು, ಅವರ ಹೆಸರು ಮತ್ತು ವಿಳಾಸ ತಿಳಿದುಬಂದಿಲ್ಲ.

ಈ ಕುರಿತು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad
Ad

Most Popular

Recent Comments

error: Content is protected !!
Share