Thursday, October 29, 2026
HomeCrimeಶಿರಸಿ | ವೃದ್ಧನ ಜೀವ ತೆಗೆದ ಕಡಿಜೇನು

ಶಿರಸಿ | ವೃದ್ಧನ ಜೀವ ತೆಗೆದ ಕಡಿಜೇನು

ಶಿರಸಿ: ಕಾಲುದಾರಿಯಲ್ಲಿ ನಡೆದುಕೊಂಡು ಮನೆಗೆ ತೆರಳುತ್ತಿದ್ದ 86 ವರ್ಷದ ವೃದ್ಧರೊಬ್ಬರು ಕಡಿಜೇನುಗಳ ದಾಳಿಗೆ ಸಿಲುಕಿ ಮೃತಪಟ್ಟ ದಾರುಣ ಘಟನೆ ಶಿರಸಿ ತಾಲೂಕಿನ ಹೊಸಳ್ಳಿ ಸಮೀಪ ಅ. 28ರಂದು ನಡೆದಿದೆ.

ವಾನಳ್ಳಿ ಅಂಚೆಯ ಹಾವಿನಗದ್ದೆ ನಿವಾಸಿ ಗಣಪತಿ ತಿಮ್ಮಾ ಗೌಡ (86) ಮೃತಪಟ್ಟವರು. ಅವರು ಅ. 28ರಂದು ಬೆಳಿಗ್ಗೆ 11.30ರಿಂದ ಮಧ್ಯಾಹ್ನ 3.45ರ ನಡುವಿನ ಅವಧಿಯಲ್ಲಿ ಹೊಸಳ್ಳಿಯ ಕಾಯಶೆಟ್ಟಿ ಮನೆಯ ಸಮೀಪ ರಾಮಕೃಷ್ಣ ಹೆಗಡೆ ಅವರ ಮನೆಯಿಂದ ತಮ್ಮ ಮನೆಗೆ ಕಾಲುದಾರಿಯಲ್ಲಿ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಸುಮಾರು 50ರಿಂದ 60 ಕಡಿಜೇನುಗಳು ದಾಳಿ ನಡೆಸಿ ಕಚ್ಚಿದ್ದು, ಗಣಪತಿ ಗೌಡ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರ ಪತ್ನಿ ದೇವಿ ಅವರು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ತಮ್ಮ ಪತಿಯ ಸಾವಿನಲ್ಲಿ ಯಾವುದೇ ಸಂಶಯವಿಲ್ಲ ಎಂದು ದೇವಿ ಅವರು ದೂರಿನಲ್ಲಿ ಸ್ಪಷ್ಟಪಡಿಸಿದ್ದಾರೆ. ಈ ಕುರಿತು ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad
Ad

Most Popular

Recent Comments

error: Content is protected !!
Share