ಮೈಸೂರು: ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಬೆಟ್ಟದತುಂಗ ಕೆಳಗಿನ ಕೊಪ್ಪಲು ಗ್ರಾಮದಲ್ಲಿ ಹರೀಶ್ ಮತ್ತು ಯೋಗೇಶ್ ಅವರಿಗೆ ಸೇರಿದ ಹುಲ್ಲಿನ ಮೆದೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಎರಡು ಹುಲ್ಲಿನ ರಾಶಿಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ಈ ಘಟನೆಯಿಂದ ಸುಮಾರು ಅಂದಾಜು 1.5 ಲಕ್ಷ ರೂಪಾಯಿ ನಷ್ಟ ಉಂಟಾಗಿದೆ. ಅಗ್ನಿಶಾಮಕ ದಳ ಸಮಯಕ್ಕೆ ಆಗಮಿಸಿ ಅಕ್ಕಪಕ್ಕದ ಮನೆಗಳಿಗೆ ಬೆಂಕಿ ಹರಡುವುದನ್ನು ನಿಯಂತ್ರಿಸಿದ್ದಾರೆ.
ನೊಂದ ರೈತರಿಗೆ ಸರ್ಕಾರ ತಕ್ಷಣ ಪರಿಹಾರ ನೀಡಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.