Friday, July 24, 2026
Join WhatsApp Group
HomeStateದ್ವೇಷ ಭಾಷಣ ತಡೆ ವಿಧೇಯಕಕ್ಕೆ ಅಂಕಿತ

ದ್ವೇಷ ಭಾಷಣ ತಡೆ ವಿಧೇಯಕಕ್ಕೆ ಅಂಕಿತ

ಬೆಂಗಳೂರು: ಬೆಳಗಾವಿಯಲ್ಲಿ ನಡೆದ ಚಳಿಗಾಲ ಅಧಿವೇಶನದ ವೇಳೆ ಗಲಾಟೆ-ಗದ್ದಲಗಳ ನಡುವೆ ಚರ್ಚೆ ಇಲ್ಲದೆ ಉಭಯ ಸದನಗಳಲ್ಲಿ ಅಂಗೀಕರಿಸಲ್ಪಟ್ಟಿದ್ದ ‘ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ತಡೆ) ವಿಧೇಯಕ’ಕ್ಕೆ ರಾಜ್ಯಪಾಲರು ಅಂಕಿತ ಹಾಕಿದ್ದಾರೆ.

ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್ ಅವರಿಗೆ ಈ ಕುರಿತು ಸಚಿವರ ನಿಯೋಗವು ಭೇಟಿ ಮಾಡಿ ವಿಧೇಯಕಕ್ಕೆ ಅನುಮೋದನೆ ನೀಡುವಂತೆ ಮನವಿ ಮಾಡಿತ್ತು. ಇದೀಗ ರಾಜ್ಯಪಾಲರ ಅಂಕಿತದೊಂದಿಗೆ ವಿಧೇಯಕ ಕಾನೂನಿನ ರೂಪ ಪಡೆದುಕೊಂಡಿದೆ.

ಇದೇ ವೇಳೆ, ಕರ್ನಾಟಕದ ಬಹು ನಿರೀಕ್ಷಿತ ಎಸ್ಸಿ ಒಳ ಮೀಸಲಾತಿ ಮಸೂದೆಗೂ ರಾಜ್ಯಪಾಲರು ಅಂಕಿತ ಹಾಕಿರುವುದಾಗಿ ತಿಳಿದುಬಂದಿದೆ. ಇದರಿಂದ ಸಾಮಾಜಿಕ ನ್ಯಾಯಕ್ಕೆ ಸಂಬಂಧಿಸಿದ ಪ್ರಮುಖ ಕಾನೂನು ಕ್ರಮಗಳಿಗೆ ಅಧಿಕೃತ ಮಾನ್ಯತೆ ದೊರೆತಂತಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share