Friday, July 24, 2026
Join WhatsApp Group
HomeLocal Newsಜನೌಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗದಿರಲಿ

ಜನೌಷಧಿ ಕೇಂದ್ರಗಳಲ್ಲಿ ಔಷಧಗಳ ಕೊರತೆಯಾಗದಿರಲಿ

ಕಾರವಾರ: ಸಾರ್ವಜನಿಕರಿಗೆ ಅತ್ಯಂತ ಕಡಿಮೆ ಬೆಲೆಯಲ್ಲಿ ಔಷಧಗಳನ್ನು ಪೂರೈಸುವ ಜನೌಷಧ ಕೇಂದ್ರಗಳಲ್ಲಿ  ಸಾರ್ವಜನರಿಂದ ಹೆಚ್ಚು ಬೇಡಿಕೆ ಇರುವ ಔಷಧಗಳನ್ನು ದಾಸ್ತಾನು ಇಡುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

ಅವರು ಶುಕ್ರವಾರ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ನಡೆದ ದಿಶಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

 ಜನೌಷಧಿ ಕೇಂದ್ರಗಳಲ್ಲಿ ಸಾರ್ವಜನಿಕರಿಂದ ಹೆಚ್ಚು ಬೇಡಿಕೆ ಇರುವ ಔಷಧಗಳ ಸಿಗುತ್ತಿಲ್ಲ ಎಂಬ ದೂರುಗಳಿದ್ದು, ಸಾರ್ವಜನಿಕರಿಗೆ ದುಬಾರಿ ಬೆಲೆಯ ಔಷಧಗಳನ್ನು ಕಡಿಮೆ ಬೆಲೆಯಲ್ಲಿ ನೀಡುವ ಉದ್ದೇಶದಿಂದಲೇ ತೆರೆದಿರುವ ಜನೌಷಧ ಕೇಂದ್ರಗಳಲ್ಲಿ ಯಾವುದೇ ಔಷಧಗಳ ಕೊರತೆಯಾಗದಂತೆ ಮತ್ತು ಪೂರೈಕೆಗೆ ಯಾವುದೇ ಅಡೆತಡೆ ಆಗದಂತೆ ನೋಡಿಕೊಳ್ಳುವಂತೆ ಆರೋಗ್ಯ ಇಲಾಖೆ ಮತ್ತು ಜಿಲ್ಲಾ ಔಷಧ ನಿಯಂತ್ರಕರಿಗೆ ನಿರ್ದೇಶನ ನೀಡಿದ ಸಂಸದರು, ಹೊಸ ಜನೌಷದ ಕೇಂದ್ರಗಳನ್ನು ತೆರೆಯಲು ಅಗತ್ಯ ಅನುಮತಿಯನ್ನು ನೀಡುವಂತೆ ತಿಳಿಸಿದರು.

ಜಿಲ್ಲೆಯಲ್ಲಿನ ಮಳೆ ಮಾಪನ ಕೇಂದ್ರಗಳು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಪರಿಶೀಲಿಸಿ, ಅಗತ್ಯವಿರುವಲ್ಲಿ ಹೊಸ ಯಂತ್ರಗಳನ್ನು ಶೀಘ್ರದಲ್ಲಿ ಅಳವಡಿಸಬೇಕು. ಬೆಳೆ ವಿಮೆಯ ಮೊತ್ತ ರೈತರಿಗೆ ಸಮರ್ಪಕವಾಗಿ ತಲುಪಬೇಕು. ಕೇಂದ್ರ ಪುರಸ್ಕೃತ ತೋಟಗಾರಿಕಾ ಇಲಾಖೆಯ ಯೋಜನೆಗಳನ್ನು ಎಲ್ಲಾ ರೈತರಿಗೆ ತಲುಪಿಸಬೇಕು. ಕೃಷಿ ಇಲಾಖೆಯಿಂದ ರೈತರ ಪಂಪ್ ಸೆಟ್‌ಗಳಿಗೆ ಸೋಲಾರ್ ಅಳವಡಿಸುವ ಕುಸುಮ್ ಬಿ ಯೋಜನೆಯ ಬಗ್ಗೆ ವ್ಯಾಪಕ ಪ್ರಚಾರ ಮತ್ತು ಮತ್ತು ಅರಿವು ಮೂಡಿಸಬೇಕು ಹಾಗೂ ಸೂರ್ಯ ಘರ್ ಯೋಜನೆಯನ್ನು ಜಿಲ್ಲೆಯ ಸರಕಾರಿ ಕಚೇರಿಗಳಲ್ಲಿ ಅಳವಡಿಸಬೇಕು ಎಂದರು.

ಪ್ರವಾಸಿ ತಾಣಗಳಲ್ಲಿ ತ್ಯಾಜ್ಯ ವಿಲೇವಾರಿಗೆ ವಿಶೇಷ ಕಾರ್ಯಕ್ರಮ ರೂಪಿಸಿ, ಅಭಿಯಾನ ನಡೆಸಬೇಕು. ನಗರ ಪ್ರದೇಶಗಲ್ಲಿ ಅವಶ್ಯವಿರುವ ಕಡೆಗಳಲ್ಲಿ ಮೊಬೈಲ್ ಟಾಯ್ಲೆಟ್ ಅಳವಡಿಸುವಂತೆ  ಸೂಚಿಸಿದ ಅವರು, ಎಲ್ಲಾ ಸರಕಾರಿ ಕಚೇರಿಗಳಲ್ಲಿರುವ ಅನುಪಯುಕ್ತ ವಸ್ತು ಮತ್ತು ವಾಹನಗಳನ್ನು  ನಿಯಮಾನುಸಾರ ವಿಲೇವಾರಿ ಮಾಡಿ ಸ್ವಚ್ಛತೆ ಕಾಪಾಡುವಂತೆ ತಿಳಿಸಿದರು.

ಕುಟುಂಬಕ್ಕೆ ಆಧಾರವಾಗಿದ್ದ ವ್ಯಕ್ತಿ ಮೃತಪಟ್ಟರೆ ನೀಡುವ ಪರಿಹಾರ ಯೋಜನೆಯಲ್ಲಿ ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ 629 ಮಂದಿ ಮಾತ್ರ ಪಡೆದಿದ್ದು, ಈ ಯೋಜನೆಯ ಬಗ್ಗೆ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸುವಂತೆ ಮತ್ತು ಅರ್ಜಿ ಸಲ್ಲಿಸುವ ವಿಧಾನಗಳನ್ನು ಸಾರ್ವಜನಿಕರಿಗೆ ತಿಳಿಸುವಂತೆ ಸಂಸದರು ತಿಳಿಸಿದರು.

ಸಭೆಯಲ್ಲಿ ಜಿಲ್ಲಾಧಿಕಾರಿ ಕೆ. ಲಕ್ಷ್ಮೀಪ್ರಿಯಾ, ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ದಿಲೀಷ್ ಶಶಿ, ದಿಶಾ ನಾಮನಿರ್ದೇಶಿತ ಸದಸ್ಯರು ಹಾಗೂ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.

ಪೋಕ್ಸೋ ಪ್ರಕರಣಗಳಲ್ಲಿ ಏರಿಕೆ

ಪೋಕ್ಸೋ ಪ್ರಕರಣಗಳು ಹೆಚ್ಚುತ್ತಿದ್ದು, ಜನವರಿ 2025ರಿಂದ ಡಿಸೆಂಬರ್ 25ರವರೆಗೆ 86 ಪ್ರಕರಣಗಳು ವರದಿಯಾಗಿದೆ. ಈ ಬಗ್ಗೆ ಶಾಲಾ-ಕಾಲೇಜುಗಳಲ್ಲಿ ಹೆಚ್ಚಿನ ಜಾಗೃತಿ ಮತ್ತು ಅರಿವು ಕಾರ್ಯಕ್ರಮಗಳನ್ನು ಆಯೋಜಿಸುವಂತೆ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದರು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share