Friday, July 24, 2026
Join WhatsApp Group
HomeLocal Newsಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ತರಬೇತಿ ಕಾರ್ಯಾಗಾರ

ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ತರಬೇತಿ ಕಾರ್ಯಾಗಾರ

ಕಾರವಾರ: ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ವತಿಯಿಂದ “ಸುಧಾರಿತ ದತ್ತಾಂಶ ವಿಜ್ಞಾನ, ಕೃತಕ ಬುದ್ಧಿಮತ್ತೆ ಮತ್ತು ಯಂತ್ರ ಕಲಿಕೆ” ವಿಷಯದ ಮೇಲೆ ಮೇ. 18ರಿಂದ 20ರವರೆಗೆ ಮೂರು ದಿನಗಳ ತರಬೇತಿ ಕಾರ್ಯಾಗಾರವನ್ನು ಅಕಾಡೆಮಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಕಾರ್ಯಗಾರದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ಮತ್ತು ತಂತ್ರಜ್ಞಾನಿಗಳು ಉಪನ್ಯಾಸವನ್ನು ನೀಡಲ್ಲಿದ್ದು, ಆಸಕ್ತ ವಿಜ್ಞಾನ ಪದವಿ, ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಂಶೋಧನಾ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು ಹಾಗೂ ವಿಜ್ಞಾನಾಸಕ್ತರು ಭಾಗವಹಿಸಬಹುದಾಗಿದೆ.

ಆಸಕ್ತ ಪ್ರತಿನಿಧಿಗಳು ಮೇ 16ರೊಳಗಾಗಿ https://forms.gle/Dyf9KfQ8ShnRLDHH6 ನ್ನು ಬಳಸಿಕೊಂಡು ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಾರ್ಯಾಗಾರದ ಸಂಯೋಜಕ ಹಾಗೂ ವೈಜ್ಞಾನಿಕಾಧಿಕಾರಿ ಶ್ರೀನಿವಾಸು ವಿ.ಕೆ ದೂ.ಸಂ: 9620767819 ಹಾಗೂ https://kstacademy.in ನ್ನು ಸಂಪರ್ಕಿಸುವಂತೆ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share