Monday, September 7, 2026
Join WhatsApp Group
HomeLocal Newsನದಿ ಜೋಡಣೆ ವಿರೋಧ ಹೋರಾಟಗಾರರಿಗೆ ಆಕ್ಷೇಪ ಪತ್ರ ವಿತರಣೆ

ನದಿ ಜೋಡಣೆ ವಿರೋಧ ಹೋರಾಟಗಾರರಿಗೆ ಆಕ್ಷೇಪ ಪತ್ರ ವಿತರಣೆ

ಸಿದ್ದಾಪುರ: ಕ್ಯಾದಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಮಹಾಗಣಪತಿ ದೇವಸ್ಥಾನದ ಆವರಣದಲ್ಲಿ ಮೇ 30ರಂದು ಬೆಳಿಗ್ಗೆ 10 ಗಂಟೆಗೆ ಅಘನಾಶಿನಿ ನದಿ ಜೋಡಣೆ ವಿರೋಧಿ ಸಭೆ ಹಾಗೂ ಆಕ್ಷೇಪ ಪತ್ರ ವಿತರಣೆ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಪ್ರಧಾನ ಸಂಚಾಲಕ ಮಾಬ್ಲೇಶ್ವರ ಬೇಡ್ಕಣಿ ತಿಳಿಸಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾದ ಆಕ್ಷೇಪ ಪತ್ರದ ಸ್ವೀಕೃತಿ ಪ್ರತಿಗಳು ಹಾಗೂ ಯುನೆಸ್ಕೋ ಸಂಸ್ಥೆಯಿಂದ ಹೋರಾಟಗಾರರ ವೇದಿಕೆಗೆ ಬಂದಿರುವ ಉತ್ತರದ ಪ್ರತಿಗಳನ್ನು ಈ ಸಂದರ್ಭದಲ್ಲಿ ವಿತರಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಾರ್ಯಕ್ರಮದಲ್ಲಿ ಅರಣ್ಯ ಭೂಮಿ ಹಕ್ಕು ಹೋರಾಟಗಾರರ ವೇದಿಕೆಯ ಅಧ್ಯಕ್ಷ ರವೀಂದ್ರ ನಾಯ್ಕ ಭಾಗವಹಿಸಲಿದ್ದಾರೆ. ಅಘನಾಶಿನಿ ನದಿ ಜೋಡಣೆ ವಿರೋಧ ಹೋರಾಟಗಾರರು ಹಾಗೂ ಅರಣ್ಯ ಭೂಮಿ ಹಕ್ಕು ಹೋರಾಟಗಾರರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗಿದೆ.

ಮೊದಲ ಹಂತದಲ್ಲಿ ಕ್ಯಾದಗಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕ್ಯಾದಗಿ ಮತ್ತು ಮಾವಿನಕೋಡ ಗ್ರಾಮಗಳ ಆಕ್ಷೇಪ ಸಲ್ಲಿಸಿದವರಿಗೆ ಪತ್ರ ವಿತರಣೆ ನಡೆಯಲಿದ್ದು, ಗ್ರೀನ್‌ ಕಾರ್ಡ್‌ ಪ್ರಮುಖರು ಸಂಬಂಧಪಟ್ಟವರಿಗೆ ಮಾಹಿತಿ ನೀಡುವಂತೆ ಪ್ರಕಟಣೆಯಲ್ಲಿ ಕೋರಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share