Friday, July 24, 2026
Join WhatsApp Group
HomeLocal Newsಗಣಪತಿ ದೇವಸ್ಥಾನದಲ್ಲಿ ನದಿ ತಿರುವು ಯೋಜನೆ ವಿರುದ್ಧ ಭಜನಾ ಅಭಿಯಾನ

ಗಣಪತಿ ದೇವಸ್ಥಾನದಲ್ಲಿ ನದಿ ತಿರುವು ಯೋಜನೆ ವಿರುದ್ಧ ಭಜನಾ ಅಭಿಯಾನ

ಯಲ್ಲಾಪುರ: ತಾಲೂಕಿನ ಆನಗೋಡ ಶಿಸ್ತಮುಡಿ ಗಣಪತಿ ಕಟ್ಟೆಯ ದೇವಸ್ಥಾನದಲ್ಲಿ ಶ್ರೀ ಸೋಂದಾ ಸ್ವರ್ಣವಲ್ಲೀ  ಶ್ರೀಗಳ ಆದೇಶದಂತೆ ನದಿ ತಿರುವು ಯೋಜನೆಯ ವಿರುದ್ಧ ಭಜನಾ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು.

ಗ್ರಾಮಗಳಲ್ಲಿ ಭಜನಾ ಕಾರ್ಯಕ್ರಮಗಳನ್ನು ನಡೆಸುವಂತೆ ನೀಡಿದ ಸೂಚನೆಯಂತೆ, ಯುಗಾದಿ ಪಾಡ್ಯದ ದಿನದಿಂದ ನವಮಿಯವರೆಗೆ ಪ್ರತಿದಿನ ಭಜನೆಗಳನ್ನು ಆಯೋಜಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಊರಿನ ಮಾತೆಯರು ಹಾಗೂ ಮಹನೀಯರು ಸಕ್ರಿಯವಾಗಿ ಭಾಗವಹಿಸಿ ಭಕ್ತಿಭಾವದಿಂದ ಭಜನಾ ಸೇವೆ ಸಲ್ಲಿಸಿದರು.

ಕಾರ್ಯಕ್ರಮದ ಕೊನೆಯ ದಿನ ನಾರಾಯಣ ಭಟ್ಟ ಅಗ್ಗಾಶಿಕುಂಬ್ರಿ ಅವರು ಅಧ್ಯಕ್ಷತೆ ವಹಿಸಿ ಮಾತನಾಡಿ, ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಆಗ್ರಹಿಸಿದರು.

ಈ ಸಂದರ್ಭದಲ್ಲಿ ಪೂರೋಹಿತರಾದ ಗೋಪಾಲಕೃಷ್ಣ ಭಟ್ ಕೊರಗಿ ಪ್ರಾಸ್ತಾವಿಕವಾಗಿ ಮಾತನಾಡಿ, ಶ್ರೀಗಳ ಆದೇಶದಂತೆ ಎಲ್ಲರೂ ಒಂದಾಗಿ ನಡೆದುಕೊಳ್ಳಬೇಕೆಂದು ಕರೆ ನೀಡಿದರು. ಜಾನ್ಹವಿ ಗಣಪತಿ ಭಟ್ ಎಲ್ಲರ ಸಹಕಾರ ಮುಂದೆಯೂ ಹೀಗೆಯೇ ಇರಲಿ ಎಂದು ಮನವಿ ಮಾಡಿಕೊಂಡರು.

ಕಾರ್ಯಕ್ರಮದ ಅಂಗವಾಗಿ ಬೇಡ್ತಿ-ಅಘನಾಶಿನಿ ನದಿ ತಿರುವು ಯೋಜನೆಯನ್ನು ಕೈಬಿಡುವಂತೆ ಶ್ರೀದೇವರಲ್ಲಿ ಪ್ರಾರ್ಥಿಸಲಾಯಿತು. ಕೆ.ಟಿ. ಹೆಗಡೆ ಸ್ವಾಗತಿಸಿ ವಂದಿಸಿದರು. ಭಕ್ತಿ, ಏಕತೆ ಮತ್ತು ಪರಿಸರದ ಬಗ್ಗೆ ಕಾಳಜಿ ವ್ಯಕ್ತಪಡಿಸಿದ ಈ ಕಾರ್ಯಕ್ರಮ ಮಾದರಿಯಾಗಿತ್ತು.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share