Saturday, September 19, 2026
Join WhatsApp Group
HomeLocal Newsಅನಂತ್ ನಾಗ್‌ಗೆ ಫಾಲ್ಕೆ ಪ್ರಶಸ್ತಿ: ಸಂಸದ ಕಾಗೇರಿ ಅಭಿನಂದನೆ

ಅನಂತ್ ನಾಗ್‌ಗೆ ಫಾಲ್ಕೆ ಪ್ರಶಸ್ತಿ: ಸಂಸದ ಕಾಗೇರಿ ಅಭಿನಂದನೆ

ಕಾರವಾರ: ಭಾರತೀಯ ಚಿತ್ರರಂಗದ ಮೇರು ನಟ ಹಾಗೂ ಬಹುಮುಖ ಪ್ರತಿಭೆಯ ಹಿರಿಯ ಕಲಾವಿದ ಅನಂತ್ ನಾಗ್ ಅವರಿಗೆ ಭಾರತೀಯ ಸಿನಿರಂಗದ ಅತ್ಯುನ್ನತ ಗೌರವವಾದ ‘ದಾದಾಸಾಹೇಬ್ ಫಾಲ್ಕೆ’ ಪ್ರಶಸ್ತಿ ಲಭಿಸಿರುವುದು ಉತ್ತರ ಕನ್ನಡ ಜಿಲ್ಲೆ ಹಾಗೂ ಸಮಸ್ತ ಕರ್ನಾಟಕಕ್ಕೆ ಹೆಮ್ಮೆಯ ಸಂಗತಿ ಎಂದು ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.

ಕಳೆದ ಹಲವು ದಶಕಗಳಿಂದ ಕನ್ನಡ, ಹಿಂದಿ ಸೇರಿದಂತೆ ವಿವಿಧ ಭಾಷೆಗಳ ನೂರಾರು ಚಿತ್ರಗಳಲ್ಲಿ ಮರೆಯಲಾಗದ ಪಾತ್ರಗಳಿಗೆ ಜೀವ ತುಂಬುವ ಮೂಲಕ ಅನಂತ್ ನಾಗ್ ಅವರು ಭಾರತೀಯ ಚಿತ್ರರಂಗವನ್ನು ಶ್ರೀಮಂತಗೊಳಿಸಿದ್ದಾರೆ. ಅವರ ನೈಜ ಅಭಿನಯ, ಕಲಾ ನಿಷ್ಠೆ ಹಾಗೂ ಸರಳ ವ್ಯಕ್ತಿತ್ವ ಇಂದಿನ ತಲೆಮಾರಿಗೆ ಸದಾ ಸ್ಫೂರ್ತಿಯಾಗಿದೆ ಎಂದು ಕಾಗೇರಿ ಹೇಳಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯ ಹೆಮ್ಮೆಯ ಪುತ್ರರಾಗಿರುವ ಅನಂತ್ ನಾಗ್ ಅವರು ತಮ್ಮ ಅದ್ಭುತ ಪ್ರತಿಭೆ ಮತ್ತು ಪರಿಶ್ರಮದ ಮೂಲಕ ಬೆಳೆದು ರಾಷ್ಟ್ರಮಟ್ಟದ ಈ ಪ್ರತಿಷ್ಠಿತ ಗೌರವಕ್ಕೆ ಪಾತ್ರರಾಗಿರುವುದು ಜಿಲ್ಲೆಯ ಸಾಂಸ್ಕೃತಿಕ ಹಿರಿಮೆಯನ್ನು ಮತ್ತಷ್ಟು ಹೆಚ್ಚಿಸಿದೆ. ಇದು ಕೇವಲ ಒಬ್ಬ ಕಲಾವಿದನಿಗೆ ಸಂದ ಗೌರವವಲ್ಲ, ಉತ್ತರ ಕನ್ನಡ ಜಿಲ್ಲೆ ಹಾಗೂ ಇಡೀ ಕನ್ನಡ ನಾಡಿನ ಕಲಾ ಪರಂಪರೆಗೆ ಸಂದ ಶ್ರೇಷ್ಠ ಗೌರವವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ತಮ್ಮ ಕಲಾ ಸೇವೆಯ ಮೂಲಕ ರಾಷ್ಟ್ರಮಟ್ಟದಲ್ಲಿ ಉತ್ತರ ಕನ್ನಡ ಜಿಲ್ಲೆಯ ಕೀರ್ತಿಯನ್ನು ಮತ್ತಷ್ಟು ಎತ್ತರಕ್ಕೇರಿಸಿದ ನೆಲದ ಹೆಮ್ಮೆಯ ಪುತ್ರ ಅನಂತ್ ನಾಗ್ ಅವರಿಗೆ ಜಿಲ್ಲೆಯ ಸಮಸ್ತ ನಾಗರಿಕರ ಪರವಾಗಿ ಹೃದಯಪೂರ್ವಕ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಕಾಗೇರಿ ತಿಳಿಸಿದ್ದಾರೆ. ಭಗವಂತ ಅವರಿಗೆ ಉತ್ತಮ ಆಯುಷ್ಯ ಹಾಗೂ ಆರೋಗ್ಯವನ್ನು ಕರುಣಿಸಲಿ ಎಂದು ಪ್ರಾರ್ಥಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share