ಯಲ್ಲಾಪುರ: ಕ್ರೀಡಾ ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಗಳು ಕೂಡ ತಮ್ಮ ಸಾಮರ್ಥ್ಯವನ್ನು ಸಾಬೀತುಪಡಿಸುತ್ತಿದ್ದು, ಯಲ್ಲಾಪುರ ತಾಲೂಕಿನ ವಿದ್ಯಾರ್ಥಿನಿ ಅಂಕಿತಾ ರವಿ ಮರಾಠಿ ರಾಷ್ಟ್ರಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಗಮನ ಸೆಳೆದಿದ್ದಾಳೆ.
ಚಿಕ್ಕ ವಯಸ್ಸಿನಲ್ಲೇ ಕರಾಟೆಯಲ್ಲಿ ಸಾಧನೆ ಮಾಡಿರುವ ಅಂಕಿತಾಳ ಯಶಸ್ಸು ಸ್ಥಳೀಯ ಕ್ರೀಡಾಭಿಮಾನಿಗಳಲ್ಲಿ ಸಂತಸ ಮೂಡಿಸಿದೆ.
ಕಾರವಾರದಲ್ಲಿ ನಡೆದ 2ನೇ ರಾಷ್ಟ್ರೀಯ ಮಟ್ಟದ ಕರಾಟೆ ಚಾಂಪಿಯನ್‌ಶಿಪ್‌ನಲ್ಲಿ 15 ವರ್ಷದೊಳಗಿನ ಬಾಲಕಿಯರ ವಿಭಾಗದಲ್ಲಿ ಉಪಳೇಶ್ವರ ಕರಾಟೆ ತರಬೇತಿ ಕೇಂದ್ರವನ್ನು ಪ್ರತಿನಿಧಿಸಿದ್ದ ಅಂಕಿತಾ ಪ್ರಥಮ ಸ್ಥಾನ ಗಳಿಸಿದ್ದಾಳೆ.
ಅಂಕಿತಾ ಹುತ್ಕಂಡದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿದ್ದು, ರವಿ ಮರಾಠಿ-ಸುಮಾ ಮರಾಠಿ ಅವರ ಪುತ್ರಿ. ಕೃಷ್ಣ ಮಂಚಿಕೇರಿ ಅವರಿಂದ ಕರಾಟೆ ತರಬೇತಿ ಪಡೆದಿದ್ದಾಳೆ.


