Join WhatsApp Group
Ad
Home Crime ಬಾಯಿಯ ಕಮಟು ವಾಸನೆ ಬಿಚ್ಚಿಟ್ಟ ಸತ್ಯ!

ಬಾಯಿಯ ಕಮಟು ವಾಸನೆ ಬಿಚ್ಚಿಟ್ಟ ಸತ್ಯ!

0
7

ಫ್ಲೈಓವರ್ ಕೆಳಗೆ ಗಾಂಜಾ ಅಮಲಿನಲ್ಲಿ ಚಾಲಕ

ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಅನುಮಾನಾಸ್ಪದ ಸ್ಥಿತಿಯಲ್ಲಿ ಕಂಡುಬಂದ ವ್ಯಕ್ತಿಯೊಬ್ಬನನ್ನು ಪೊಲೀಸರು ವಿಚಾರಣೆ ನಡೆಸಿದಾಗ, ಆತ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಳಿಕ ವೈದ್ಯಕೀಯ ಪರೀಕ್ಷೆಯಲ್ಲೂ ಅದು ದೃಢಪಟ್ಟಿದ್ದು, ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಸಾರ್ವಜನಿಕ ಸ್ಥಳದಲ್ಲಿ ಗಾಂಜಾ ಸೇವನೆ ಮಾಡಿದ್ದ ಆರೋಪದಡಿ ಅಂಕೋಲಾ ಪೊಲೀಸರು ಚಾಲಕನೊಬ್ಬನ ವಿರುದ್ಧ ಎನ್‌ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ.

Ad

ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕಿ (ತನಿಖೆ-2) ಲಲಿತಾ ರಜಪೂತ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಪ್ರಕರಣದ ಆರೋಪಿ ಇಸ್ಮಾಯಿಲ್ ಹುಸೇನ್ ಶೇಖ್ (32) ಕಾಕರಮಠ ನಿವಾಸಿಯಾಗಿದ್ದು, ಚಾಲಕನಾಗಿ ಕೆಲಸ ಮಾಡುತ್ತಿದ್ದಾನೆ.

ಜುಲೈ 24ರಂದು ರಾತ್ರಿ 8 ಗಂಟೆ ಸುಮಾರಿಗೆ ಅಂಕೋಲಾ ಪಟ್ಟಣದ ಜಿ.ಸಿ. ಸರ್ಕಲ್‌ನ ಫ್ಲೈಓವರ್ ಸಮೀಪದ ಸಾರ್ವಜನಿಕ ಸ್ಥಳದಲ್ಲಿ ಆತ ಮಾದಕ ವಸ್ತು ಸೇವಿಸಿರುವಂತೆ ಕಂಡುಬಂದಿದ್ದಾನೆ. ಆತನ ಬಾಯಿಯಿಂದ ತೀವ್ರ ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ವಿಚಾರಣೆ ವೇಳೆ ಆತ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ನಂತರ ಅಂಕೋಲಾ ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದ್ದು, ಪರೀಕ್ಷಾ ವರದಿಯಲ್ಲಿ ಗಾಂಜಾ ಸೇವನೆ ದೃಢಪಟ್ಟಿದೆ.

ಈ ಹಿನ್ನೆಲೆಯಲ್ಲಿ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

NO COMMENTS

LEAVE A REPLY

Please enter your comment!
Please enter your name here

error: Content is protected !!