Saturday, September 19, 2026
Join WhatsApp Group
HomeCrimeಅಂಕೋಲಾ | ಡೀಸೆಲ್ ಅಕ್ರಮ ಸಂಗ್ರಹ: ವ್ಯಕ್ತಿ ವಿರುದ್ಧ ಪ್ರಕರಣ

ಅಂಕೋಲಾ | ಡೀಸೆಲ್ ಅಕ್ರಮ ಸಂಗ್ರಹ: ವ್ಯಕ್ತಿ ವಿರುದ್ಧ ಪ್ರಕರಣ

ಅಂಕೋಲಾ: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಡೀಸೆಲ್ ಸಂಗ್ರಹಿಸಿ, ಯಾವುದೇ ಪರವಾನಗಿ ಇಲ್ಲದೆ ಹೆದ್ದಾರಿ ಪಕ್ಕದಲ್ಲಿ ಅಪಾಯಕಾರಿ ರೀತಿಯಲ್ಲಿ ಶೇಖರಿಸಿಟ್ಟಿದ್ದ ಆರೋಪದ ಮೇಲೆ ಅಂಕೋಲಾ ತಾಲೂಕಿನ ರಾಮನಗುಳಿ ದುಗ್ಗನಬೈಲ್‌ನ ವ್ಯಕ್ತಿಯೊಬ್ಬರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದುಗ್ಗನಬೈಲ್ ರಾಮನಗುಳಿ ನಿವಾಸಿ, ಟ್ರಾನ್ಸ್‌ಪೋರ್ಟ್ ಉದ್ಯಮ ನಡೆಸುತ್ತಿರುವ ಚಂದ್ರಶೇಖರ ಪಾಂಡುರಂಗ ನಾಯ್ಕ (37) ಆರೋಪಿ. ಸೆ.14ರ ಬೆಳಗಿನ ಜಾವ 1.45ರ ಸುಮಾರಿಗೆ ರಾಮನಗುಳಿ ದುಗ್ಗನಬೈಲ್ ಬಳಿಯ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ಈ ಕಾರ್ಯ ನಡೆಯುತ್ತಿರುವುದು ಪೊಲೀಸರ ಗಮನಕ್ಕೆ ಬಂದಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುವ ವಾಹನಗಳಿಂದ ಡೀಸೆಲ್ ಸಂಗ್ರಹಿಸಿ, ಅದು ಬೆಂಕಿ ಅಥವಾ ದಹ್ಯ ವಸ್ತು ಎಂಬುದು ಗೊತ್ತಿದ್ದರೂ ಯಾವುದೇ ಸುರಕ್ಷತಾ ಕ್ರಮ ಅಥವಾ ಮುಂಜಾಗ್ರತೆ ಕೈಗೊಳ್ಳದೆ ಹೆದ್ದಾರಿ ಬದಿಯಲ್ಲಿ ಸಂಗ್ರಹಿಸಿಡಲಾಗಿತ್ತು. ಅಲ್ಲದೆ, ಸಂಬಂಧಪಟ್ಟ ಪ್ರಾಧಿಕಾರದಿಂದ ಯಾವುದೇ ಪರವಾನಗಿ ಪಡೆಯದೆ ಡೀಸೆಲ್ ಶೇಖರಿಸಿಟ್ಟಿರುವ ಆರೋಪವೂ ಇದೆ.

ದಾಳಿಯ ವೇಳೆ ಸುಮಾರು 20 ಲೀಟರ್ ಡೀಸೆಲ್ ಇದ್ದ ಕ್ಯಾನ್ ಹಾಗೂ ಸುಮಾರು 10 ಲೀಟರ್ ಡೀಸೆಲ್ ಇದ್ದ ಇನ್ನೊಂದು ಕ್ಯಾನ್ ಪತ್ತೆಯಾಗಿವೆ. ಇದರೊಂದಿಗೆ ಡೀಸೆಲ್ ಸಂಗ್ರಹಿಸಲು ಬಳಸಲಾಗುತ್ತಿದ್ದ ಹಸಿರು ಬಣ್ಣದ ಪ್ಲಾಸ್ಟಿಕ್ ಪೈಪ್, ಡೀಸೆಲ್ ತುಂಬಲು ಬಳಸುತ್ತಿದ್ದ ಅರ್ಧ ಭಾಗ ಕತ್ತರಿಸಿದ ಪ್ಲಾಸ್ಟಿಕ್ ಕ್ಯಾನ್ ಹಾಗೂ ಮೋಟರ್ ಸೇರಿದಂತೆ ಇತರ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಸಂಬಂಧ ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುರುನಾಥ ಹಾದಿಮನಿ (ಕಾ&ಸೂ) ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad

Most Popular

error: Content is protected !!
Share