Monday, September 7, 2026
Join WhatsApp Group
HomeCrimeಅಂಕೋಲಾ | ಗೂಡಂಗಡಿಯಲ್ಲೂ ಸಿಕ್ಕಿತು ಹೆಂಡ!

ಅಂಕೋಲಾ | ಗೂಡಂಗಡಿಯಲ್ಲೂ ಸಿಕ್ಕಿತು ಹೆಂಡ!

ಅಂಕೋಲಾ: ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಸರಾಯಿ ಸ್ಯಾಚೇಟ್‌ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬನನ್ನು ಅಂಕೋಲಾ ಪೊಲೀಸರು ಬಂಧಿಸಿದ್ದು, ಮದ್ಯ ಹಾಗೂ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಅಂಕೋಲಾ ಪೊಲೀಸ್ ಠಾಣೆಯ ಪೊಲೀಸ್ ಉಪನಿರೀಕ್ಷಕ ಗುರುನಾಥ ಹಾದಿಮನಿ ಅವರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಾಗಿದೆ.

ಅಂಕೋಲಾ ತಾಲೂಕಿನ ಹಿಲ್ಲೂರ ಸಮೀಪದ ಹೊಳೆಮಕ್ಕಿ ಕ್ರಾಸ್ ಬಳಿ ಸಾರ್ವಜನಿಕ ರಸ್ತೆಯ ಬದಿಯಲ್ಲಿ ಹೊಳೆಮಕ್ಕಿ ನಿವಾಸಿ ತಿಮ್ಮಣ್ಣ ದೇವಣ್ಣ ನಾಯಕ (65) ಎಂಬಾತ ಅಕ್ರಮವಾಗಿ ಸರಾಯಿ ಮಾರಾಟ ನಡೆಸುತ್ತಿದ್ದ ವೇಳೆ ದಾಳಿ ನಡೆಸಲಾಗಿದೆ.

ದಾಳಿಯ ವೇಳೆ ವಿವಿಧ ಬ್ರಾಂಡ್‌ಗಳ ಒಟ್ಟು 52 ಸರಾಯಿ ಸ್ಯಾಚೇಟ್ ಹಾಗೂ ಟೆಟ್ರಾ ಪ್ಯಾಕ್‌ಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಅವುಗಳ ಒಟ್ಟು ಮೌಲ್ಯ ₹2,850 ಎಂದು ಅಂದಾಜಿಸಲಾಗಿದೆ. ಆರೋಪಿಯು ಅಂಕೋಲಾದ ಲಕ್ಷ್ಮೀ ವೈನ್ಸ್ ಮದ್ಯದಂಗಡಿಯಿಂದ ಮದ್ಯ ಖರೀದಿಸಿ ಪರವಾನಗಿ ಇಲ್ಲದೆ ಮಾರಾಟ ಮಾಡುತ್ತಿದ್ದನೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಸಂಬಂಧ ತಿಮ್ಮಣ್ಣ ದೇವಣ್ಣ ನಾಯಕ ಹಾಗೂ ಲಕ್ಷ್ಮೀ ವೈನ್ಸ್ ಮಾಲೀಕರ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share