Friday, July 24, 2026
Join WhatsApp Group
HomeLocal Newsಮನೆಯೊಳಗೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸಾವು

ಮನೆಯೊಳಗೆ ಕಾಲು ಜಾರಿ ಬಿದ್ದು ಕೂಲಿ ಕಾರ್ಮಿಕ ಸಾವು

ಅಂಕೋಲಾ: ಮನೆಯೊಳಗೆ rack ಮೇಲೆ ಹತ್ತಿ ಸಾಮಾನು ತೆಗೆಯುವ ವೇಳೆ ಕಾಲು ಜಾರಿ ಬಿದ್ದು ತಲೆಗೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಅಂಕೋಲಾ ತಾಲೂಕಿನ ಬೊಬ್ರುವಾಡದಲ್ಲಿ ನಡೆದಿದೆ.

ಮೃತರನ್ನು ಮಹ್ಮದ್ ಅಲಿ ಬಾಕ್ಸರಸಾಬ್ ಶೇಖ್ (48) ಎಂದು ಗುರುತಿಸಲಾಗಿದೆ. ಇವರು ಕೂಲಿ ಕೆಲಸ ಮಾಡಿಕೊಂಡಿದ್ದರು.

ಮೇ 21ರಂದು ರಾತ್ರಿ ಮನೆಯೊಳಗಿನ ಕೋಣೆಯಲ್ಲಿ rack ಮೇಲಿದ್ದ ಯಾವುದೋ ಸಾಮಾನುಗಳನ್ನು ತೆಗೆಯಲು ಹತ್ತಿದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದಿದ್ದು, ತಲೆಯ ಹಿಂಭಾಗಕ್ಕೆ ಗಂಭೀರ ಗಾಯವಾಗಿತ್ತು.

ಗಾಯಗೊಂಡ ಅವರನ್ನು ಮೊದಲಿಗೆ ಅಂಕೋಲಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪ್ರಾಥಮಿಕ ಚಿಕಿತ್ಸೆ ನೀಡಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಕಾರವಾರ ಜಿಲ್ಲಾ ಆಸ್ಪತ್ರೆಗೆ ಸಾಗಿಸಲಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೇ 25ರಂದು ಮಧ್ಯಾಹ್ನ ಮೃತಪಟ್ಟಿದ್ದಾರೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share