Monday, September 7, 2026
Join WhatsApp Group
HomeCrimeಕೋಟೆವಾಡಾದಲ್ಲಿ ಮಟಕಾ ಆಟ; ಆರೋಪಿ ವಶಕ್ಕೆ

ಕೋಟೆವಾಡಾದಲ್ಲಿ ಮಟಕಾ ಆಟ; ಆರೋಪಿ ವಶಕ್ಕೆ

ಅಂಕೋಲಾ: ಸಾರ್ವಜನಿಕ ಸ್ಥಳದಲ್ಲಿ ಓಸಿ–ಮಟಕಾ ಜೂಜಾಟ ಆಡಿಸುತ್ತಿದ್ದ ಆರೋಪದ ಮೇಲೆ ವ್ಯಕ್ತಿಯೊಬ್ಬನ ವಿರುದ್ಧ ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಅಂಕೋಲಾ ಪುರಸಭೆ ಸ್ಮಶಾನದ ಸಮೀಪದ ಕೋಟೆವಾಡಾ ಸಾರ್ವಜನಿಕ ಸ್ಥಳದಲ್ಲಿ ಆ.24ರಂದು ಸಂಜೆ 7.30ರ ಸುಮಾರಿಗೆ ವ್ಯಕ್ತಿಯೊಬ್ಬ ಸಾರ್ವಜನಿಕರನ್ನು ಕರೆದು ಅದೃಷ್ಟದ ಸಂಖ್ಯೆಗಳ ಮೇಲೆ ಹಣ ಪಣಕ್ಕಿಟ್ಟು ಮಟಕಾ ಆಡಿಸುತ್ತಿದ್ದಾನೆ ಎಂಬ ಮಾಹಿತಿ ಪೊಲೀಸರಿಗೆ ಲಭಿಸಿತ್ತು.

ಮಾಹಿತಿ ಆಧರಿಸಿ ಸ್ಥಳಕ್ಕೆ ತೆರಳಿದಾಗ ನದಿಬಾಗ–ಬೊಬ್ರವಾಡಾ ನಿವಾಸಿ ಪಾಂಡುರಂಗ ಸೀತಾರಾಮ ನಾಯ್ಕ (40) ಎಂಬಾತ ಸಾರ್ವಜನಿಕರಿಂದ ಹಣ ಪಡೆದು ಅವರು ಹೇಳಿದ ಅಂಕೆಗಳನ್ನು ಚೀಟಿಯಲ್ಲಿ ಬರೆದುಕೊಳ್ಳುತ್ತಾ ಓಸಿ–ಮಟಕಾ ಜೂಜಾಟ ನಡೆಸುತ್ತಿದ್ದ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಅದೃಷ್ಟದ ಸಂಖ್ಯೆ ಬಂದರೆ ₹1ಕ್ಕೆ ₹80 ನೀಡುವುದಾಗಿ ಹೇಳಿ ಸಾರ್ವಜನಿಕರನ್ನು ಆಟಕ್ಕೆ ಸೆಳೆಯುತ್ತಿದ್ದ ಎನ್ನಲಾಗಿದ್ದು, ಈ ವೇಳೆ ಆತನ ಬಳಿಯಿಂದ ₹520 ನಗದು ಹಾಗೂ ಮಟಕಾ ಜೂಜಾಟಕ್ಕೆ ಬಳಸುತ್ತಿದ್ದ ಇತರೆ ಸಾಮಗ್ರಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಕುರಿತು ಅಂಕೋಲಾ ಪೊಲೀಸ್ ಠಾಣೆಯ ಪಿಎಸ್‌ಐ ಗುರುನಾಥ ಬಿ. ಹಾದಿಮನಿ ಅವರು ಸರ್ಕಾರದ ಪರವಾಗಿ ದೂರು ನೀಡಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share