Friday, July 24, 2026
Join WhatsApp Group
HomeCrimeಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರ ಬಂಧನ

ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಐವರ ಬಂಧನ

ಅಂಕೋಲಾ: ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಪಟ್ಟಣದಲ್ಲಿ ಇತ್ತೀಚೆಗೆ ನಡೆದ ಸರಣಿ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಅಂಕೋಲಾ ಪೊಲೀಸರು ಐವರು ಆರೋಪಿತರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ಕಳ್ಳತನಕ್ಕೆ ಬಳಸಿದ ವಾಹನಗಳು ಹಾಗೂ ಕಳುವಾದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸುಂಕಸಾಳದಲ್ಲಿರುವ ಬ್ಯಾಂಕ್‌ ಆಫ್‌ ಬರೋಡಾ ಶಾಖೆಯಲ್ಲಿ ಗೋಡೆ ಕೊರೆದು ಒಳನುಗ್ಗಿ ಏಸರ್ ಕಂಪನಿಯ ಟ್ಯಾಬ್ ಕಳ್ಳತನ ಮಾಡಿರುವುದು, ಕಲ್ಪತರು ವಿವಿಧೋದ್ದೇಶಗಳ ಸಹಕಾರಿ ಸಂಘ ನಿಯಮಿತ ಹೆಗ್ಗಾರಲ್ಲಿ 8,000 ರೂ. ನಗದು ಹಣ ಕಳವು, ಹಾಗೂ ಕನಕನಹಳ್ಳಿಯ ಅನ್ನಪೂರ್ಣ ಮಾರ್ಟ್ ಕಿರಾಣಿ ಅಂಗಡಿಯಲ್ಲಿ 10,000 ರೂ. ನಗದು ಮತ್ತು ಇತರೆ ಸಾಮಾನುಗಳ ಕಳ್ಳತನ ನಡೆದಿರುವ ಕುರಿತು ಅಂಕೋಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣಗಳು ದಾಖಲಾಗಿದ್ದವು.

ಪ್ರಕರಣಗಳ ತನಿಖೆಗಾಗಿ ವಿಶೇಷ ತಂಡ ರಚಿಸಲಾಗಿದ್ದು, ಖಚಿತ ಮಾಹಿತಿಯ ಆಧಾರದ ಮೇಲೆ 01-03-2026ರಂದು ಐವರು ಆರೋಪಿತರನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತರನ್ನು ವಿನಾಯಕ ಸಿದ್ದಿ (ಹಳವಳ್ಳಿ), ರಾಜೇಶ್ ಸಿದ್ದಿ (ದುಗ್ಗದಮನೆ), ಪ್ರಶಾಂತ ಸಿದ್ದಿ (ಸಾಮಳಲ್ಗಾವ), ನಿಲೇಶ್ ಸಿದ್ದಿ (ಕಲ್ಲೇಶ್ವರ) ಹಾಗೂ ನಾಗೇಶ್ ಸಿದ್ದಿ (ಹಳವಳ್ಳಿ) ಎಂದು ಗುರುತಿಸಲಾಗಿದೆ.

ಆರೋಪಿತರ ಬಳಿಯಿಂದ ಕಳ್ಳತನಕ್ಕೆ ಬಳಸಿದ ಹಿರೋ ಕಂಪನಿಯ ಎರಡು ಮೋಟಾರ್ ಸೈಕಲ್‌ಗಳು, ಬಜಾಜ್ ಕಂಪನಿಯ ಒಂದು ಬೈಕ್ ಹಾಗೂ ಏಸರ್ ಕಂಪನಿಯ OneT10-22L ಟ್ಯಾಬ್ ಸೇರಿದಂತೆ ಕೃತ್ಯಕ್ಕೆ ಬಳಸಿದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.

ಎಲ್ಲಾ ಆರೋಪಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾದೆ.

ಈ ಕಾರ್ಯಾಚರಣೆ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ದೀಪನ್ ಎಂ.ಎನ್. ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಕೃಷ್ಣಮೂರ್ತಿ ಜಿ., ಪೊಲೀಸ್ ಉಪಾಧೀಕ್ಷಕ ಗಿರೀಶ ಎಸ್.ವಿ. ಅವರ ಮೇಲ್ವಿಚಾರಣೆಯಲ್ಲಿ, ಪಿಐ ಚಂದ್ರಶೇಖರ ಮಠಪತಿ ಅವರ ನೇತೃತ್ವದಲ್ಲಿ ನಡೆಯಿತು. ಸ್ವತ್ತು ಕಳುವು ಪ್ರಕರಣಗಳಲ್ಲಿ ಆರೋಪಿತರ ಪತ್ತೆಗಾಗಿ ಶ್ರಮಿಸಿದ ಎಲ್ಲಾ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳು ಅಭಿನಂದಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share