Monday, September 7, 2026
Join WhatsApp Group
HomeLocal Newsಗ್ರಾಮ ಒನ್ ಕೇಂದ್ರ ಆರಂಭಿಸಬೇಕಾ, ಆ.15ರೊಳಗೆ ಅರ್ಜಿ ಹಾಕಿ

ಗ್ರಾಮ ಒನ್ ಕೇಂದ್ರ ಆರಂಭಿಸಬೇಕಾ, ಆ.15ರೊಳಗೆ ಅರ್ಜಿ ಹಾಕಿ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ 14 ಗ್ರಾಮ ಪಂಚಾಯಿತಿಗಳಲ್ಲಿ ಹೊಸದಾಗಿ ಗ್ರಾಮ ಒನ್ (Grama One) ಸಮಗ್ರ ನಾಗರಿಕ ಸೇವಾ ಕೇಂದ್ರಗಳನ್ನು ಆರಂಭಿಸಲು ಆಸಕ್ತ ಪ್ರಾಂಚೈಸಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗ್ರಾಮೀಣ ನಾಗರಿಕರಿಗೆ ಸರ್ಕಾರಿ ಹಾಗೂ ಇತರೆ ಅಗತ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಈ ಕೇಂದ್ರಗಳನ್ನು ಆರಂಭಿಸಲಾಗುತ್ತಿದ್ದು, ಅಂಕೋಲಾ ತಾಲೂಕಿನ ಅಗಸೂರು, ಭಟ್ಕಳ ತಾಲೂಕಿನ ಕೊಪ್ಪ, ದಾಂಡೇಲಿ ತಾಲೂಕಿನ ಆಲೂರ, ಹೊನ್ನಾವರ ತಾಲೂಕಿನ ಕೋಡಣಿ, ಕಾರವಾರ ತಾಲೂಕಿನ ಕೆರವಡಿ, ಕುಮಟಾ ತಾಲೂಕಿನ ಬರ್ಗಿ, ಸಿದ್ದಾಪುರ ತಾಲೂಕಿನ ನಿಲಕುಂದ, ಶಿರಸಿ ತಾಲೂಕಿನ ಸುಗಾವಿ, ಸಾಲ್ಕಣಿ ಹಾಗೂ ಗುಡ್ಡಾಪುರ, ಜೋಯಿಡಾ (ಸೂಪಾ) ತಾಲೂಕಿನ ಬಂಜಾರ್‌ಕುಣಗ, ನಾಗೋಡ್ ಮತ್ತು ಉಳವಿ, ಯಲ್ಲಾಪುರ ತಾಲೂಕಿನ ನಂದೊಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಹೊಸ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಅವಕಾಶ ಕಲ್ಪಿಸಲಾಗಿದೆ.

ಆಸಕ್ತ ಪ್ರಾಂಚೈಸಿಗಳು ಆಗಸ್ಟ್‌ 15ರೊಳಗೆ ಸೇವಾ ಸಿಂಧು ಪೋರ್ಟಲ್‌ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ತಾಲೂಕಿನ ತಹಶೀಲ್ದಾರರ ಕಚೇರಿಯನ್ನು ಸಂಪರ್ಕಿಸುವಂತೆ ಅಪರ ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಗ್ರಾಮ ಒನ್ ಕೇಂದ್ರಗಳ ಮೂಲಕ ವಿವಿಧ ಸರ್ಕಾರಿ ಮತ್ತು ಖಾಸಗಿ ಸೇವೆಗಳು ಗ್ರಾಮ ಮಟ್ಟದಲ್ಲೇ ಲಭ್ಯವಾಗಲಿದ್ದು, ಗ್ರಾಮೀಣ ನಾಗರಿಕರಿಗೆ ಸುಲಭವಾಗಿ ಸೇವೆ ಒದಗಿಸುವ ಜೊತೆಗೆ ಸ್ಥಳೀಯರಿಗೆ ಸ್ವಯಂ ಉದ್ಯೋಗದ ಅವಕಾಶವೂ ದೊರೆಯಲಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

error: Content is protected !!
Share