Friday, July 24, 2026
Join WhatsApp Group
HomeInformationಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಅರ್ಜಿ ಆಹ್ವಾನಿಸಿದೆ ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.

ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ (ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. (ವಿದ್ಯಾರ್ಥಿ ಭಾವಚಿತ್ರ ಹಿಂಬದಿ ತಪ್ಪದೇ ಅವರ ಹೆಸರು ಬರೆಯಬೇಕು)

ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘವು ನಿಗದಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ 10-5-2026 ರೊಳಗಾಗಿ – ಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು-09 ಇಲ್ಲಿಗೆ ತಲಪುವಂತೆ ಕಳುಹಿಸಬೇಕು.

ಅರ್ಜಿ ಮತ್ತು ಇತರೆ ಮಾಹಿತಿಗಾಗಿ ಆಯಾ ಜಿಲ್ಲಾ ಸಂಘವನ್ನು ಸಂಪರ್ಕಿಸಿ ಪಡೆಯಬಹುದು ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ. ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share