Friday, July 24, 2026
Join WhatsApp Group
HomeInformationಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

ಅಣಬೆ ಬೇಸಾಯ ತರಬೇತಿಗೆ ಅರ್ಜಿ ಆಹ್ವಾನ

ಕಾರವಾರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಮೇ 11ರಿಂದ 10 ದಿನಗಳ ಕಾಲ ನಿರುದ್ಯೋಗಿ ಯುವಕ ಮತ್ತು ಯುವತಿಯರಿಗೆ ಉಚಿತ ಅಣಬೆ ಬೇಸಾಯ ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.

ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 50 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಯುವಕ-ಯುವತಿಯರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದೆ. ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳನ್ನು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು.

ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು. ಅಭ್ಯರ್ಥಿಗಳು ಸ್ಥಳೀಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರ ವಿತರಿಸಲಾಗುವುದು.

ಆಸಕ್ತಿಯುಳ್ಳ ಅಭ್ಯರ್ಥಿಗಳು ಮೇ 5ರಂದು ಬೆಳಗ್ಗೆ 10 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ (ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು.

ಸಂದರ್ಶನಕ್ಕೆ ಹಾಜರಾಗಲು ಅಸಾಧ್ಯವಾದಲ್ಲಿ ಮೇ 5ರೊಳಗೆ ಸಂಸ್ಥೆಯ ದೂರವಾಣಿ ಸಂಖ್ಯೆ-8970476050, 9591514154, 9686248369, 6363139123, 9505894247ನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದೆಂದು ಸಂಸ್ಥೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share