Friday, July 24, 2026
Join WhatsApp Group
HomeLocal Newsಕುಟುಂಬ ಕಲಹ; ಆತ್ಮಹತ್ಯೆಗೆ ಶರಣಾದರಾ ಅಡಿಕೆ ವ್ಯಾಪಾರಿ?

ಕುಟುಂಬ ಕಲಹ; ಆತ್ಮಹತ್ಯೆಗೆ ಶರಣಾದರಾ ಅಡಿಕೆ ವ್ಯಾಪಾರಿ?

ಶಿರಸಿ: ಕುಟುಂಬ ಕಲಹದ ಹಿನ್ನೆಲೆಯಲ್ಲಿ ಮನನೊಂದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯ ಎಸಳೆ ಗ್ರಾಮದಲ್ಲಿ ನಡೆದಿರುವುದಾಗಿ ವರದಿಯಾಗಿದೆ.

ಮೃತರನ್ನು ಎಲ್.ಕೆ. ಹೆಗಡೆ (56) ಎಂದು ಗುರುತಿಸಲಾಗಿದೆ. ಅವರು ಮೂಲತಃ ಕಾನಗೋಡು ಗ್ರಾಮದವರಾಗಿದ್ದು, ಕಳೆದ ಕೆಲವು ವರ್ಷಗಳಿಂದ ಎಸಳೆ ಗ್ರಾಮದಲ್ಲಿ ಕುಟುಂಬದೊಂದಿಗೆ ನೆಲೆಸಿದ್ದು, ಅಡಿಕೆ ವ್ಯಾಪಾರ ನಡೆಸುತ್ತಿದ್ದರು ಎಂದು ತಿಳಿದುಬಂದಿದೆ.

ಲಭ್ಯ ಮಾಹಿತಿಯಂತೆ, ಭಾನುವಾರ ಬೆಳಿಗ್ಗೆ ಹೆಗಡೆ ಹಾಗೂ ಅವರ ಪತ್ನಿಯ ನಡುವೆ ಕುಟುಂಬದ ವಿಚಾರವೊಂದಕ್ಕೆ ಸಂಬಂಧಿಸಿ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಈ ಘಟನೆ ಬಳಿಕ ಮನನೊಂದ ಅವರು ಮನೆಯ ಬಾತ್‌ರೂಮ್‌ಗೆ ತೆರಳಿ ಕುತ್ತಿಗೆಗೆ ಬ್ಲೇಡ್‌ನಿಂದ ಗಾಯ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಕುಟುಂಬದ ಸದಸ್ಯರು ತಕ್ಷಣ ಗಮನಿಸಿ ರಕ್ಷಿಸಲು ಮುಂದಾದರೂ, ಅತಿಯಾದ ರಕ್ತಸ್ರಾವದಿಂದ ಅವರು ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಘಟನೆಯ ನಿಖರ ಕಾರಣ ಹಾಗೂ ಸಾವಿಗೆ ಕಾರಣವಾದ ಸಂದರ್ಭಗಳ ಕುರಿತು ತನಿಖೆ ಮುಂದುವರಿಸಿರುವುದಾಗಿ ತಿಳಿದುಬಂದಿದೆ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರನಾಗಿ, ಉಪ ಸಂಪಾದಕನಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತನಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad

Most Popular

error: Content is protected !!
Share