ಶಿರಸಿ/ಬಳ್ಳಾರಿ: ಕಾಂಗ್ರೆಸ್ ಸರ್ಕಾರದ ವೈಫಲ್ಯಗಳು ಹಾಗೂ ಆಡಳಿತದ ವಿರುದ್ಧ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ನಡೆಯುತ್ತಿರುವ 10 ದಿನಗಳ ‘ಬಳ್ಳಾರಿ ಚಲೋ’ ಪಾದಯಾತ್ರೆ 9ನೇ ದಿನಕ್ಕೆ ಕಾಲಿಟ್ಟಿದ್ದು, ಈ ಕಾರ್ಯಕ್ರಮದಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ರಾಜ್ಯ ಸರ್ಕಾರದ ವಿರುದ್ಧ ವಿವಿಧ ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹಮ್ಮಿಕೊಂಡಿರುವ ಈ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಬಿಜೆಪಿ ನಾಯಕರು, ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಪಾಲ್ಗೊಳ್ಳುತ್ತಿದ್ದಾರೆ. ಸರ್ಕಾರದ ಆಡಳಿತ ವೈಫಲ್ಯಗಳನ್ನು ಜನರ ಮುಂದಿಡುವುದು ಹಾಗೂ ವಿವಿಧ ಜನಪರ ವಿಚಾರಗಳ ಕುರಿತು ಸರ್ಕಾರದ ಗಮನ ಸೆಳೆಯುವುದು ಪಾದಯಾತ್ರೆಯ ಪ್ರಮುಖ ಉದ್ದೇಶವಾಗಿದೆ.
9ನೇ ದಿನದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ವಕ್ತಾರ ಹರಿಪ್ರಕಾಶ ಕೋಣೆಮನೆ ಹಾಗೂ ಬಿಜೆಪಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಪ್ರೇಮಕುಮಾರ ನಾಯ್ಕ ಅವರ ನೇತೃತ್ವದಲ್ಲಿ ಉತ್ತರ ಕನ್ನಡ ಜಿಲ್ಲೆಯ ಬಿಜೆಪಿ ಮುಖಂಡರಾದ ಪ್ರಸಾದ ಹೆಗಡೆ, ಬಾಲು ನಾಯಕ್, ಸೋಮು ನಾಯ್ಕ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದರು.
ಯಲ್ಲಾಪುರ ಕ್ಷೇತ್ರದ ಬಿಎಲ್‌ಎ-1 ರಾಘು ಭಟ್ ಹಾಸಣಗಿ, ಬನವಾಸಿ ಮಂಡಲ ರೈತ ಮೋರ್ಚಾ ಅಧ್ಯಕ್ಷ ಮಣಿಕಂಠ ಎಂ. ಪಾಟೀಲ, ಬನವಾಸಿ ಮಂಡಲ ಯುವ ಮೋರ್ಚಾ ಉಪಾಧ್ಯಕ್ಷ ಕೃಷ್ಣಮೂರ್ತಿ ನಾಯ್ಕ ಬೆಂಗಳೆ, ಪ್ರಧಾನ ಕಾರ್ಯದರ್ಶಿಗಳಾದ ಸಂತೋಷ ನಾಯ್ಕ ಉಪ್ಪಳೆಕೊಪ್ಪ, ನಾಗರಾಜ ಹೆಗಡೆ, ರಾಜೇಂದ್ರ ಶಿವಾಜಿ ಗೌಡರ್, ಪವನಕುಮಾರ್ ಕೇಸರಕರ್ ಸೇರಿದಂತೆ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರು ಪಾದಯಾತ್ರೆಯಲ್ಲಿ ಹೆಜ್ಜೆ ಹಾಕಿದರು.
10 ದಿನಗಳ ಕಾಲ ನಡೆಯುತ್ತಿರುವ ‘ಬಳ್ಳಾರಿ ಚಲೋ’ ಪಾದಯಾತ್ರೆಯಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಬಿಜೆಪಿ ಕಾರ್ಯಕರ್ತರು ಭಾಗವಹಿಸುತ್ತಿದ್ದು, ಕಾಂಗ್ರೆಸ್ ಸರ್ಕಾರದ ಆಡಳಿತ, ವಿವಿಧ ಇಲಾಖೆಗಳ ಕಾರ್ಯವೈಖರಿ ಹಾಗೂ ಜನಸಾಮಾನ್ಯರಿಗೆ ಸಂಬಂಧಿಸಿದ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ನಡೆಸುತ್ತಿದೆ.
ಪಾದಯಾತ್ರೆಯ ಅಂತಿಮ ಹಂತದತ್ತ ಕಾರ್ಯಕ್ರಮ ಸಾಗುತ್ತಿರುವ ಹಿನ್ನೆಲೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರಲ್ಲಿ ಉತ್ಸಾಹ ಹೆಚ್ಚಾಗಿದ್ದು, ಉತ್ತರ ಕನ್ನಡ ಜಿಲ್ಲೆಯಿಂದಲೂ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಪಾಲ್ಗೊಂಡಿರುವುದು ಗಮನ ಸೆಳೆಯಿತು.