Thursday, October 22, 2026
HomeLocal Newsಶರನ್ನವರಾತ್ರಿ: ಮಧುಕೇಶ್ವರ ಸನ್ನಿಧಿಯಲ್ಲಿ ಭಜನಾ ಗಾಯನ

ಶರನ್ನವರಾತ್ರಿ: ಮಧುಕೇಶ್ವರ ಸನ್ನಿಧಿಯಲ್ಲಿ ಭಜನಾ ಗಾಯನ

ಬನವಾಸಿ: ಶರನ್ನವರಾತ್ರಿ ಉತ್ಸವದ ಸಂದರ್ಭದಲ್ಲಿ ದೇವಿಯ ಆರಾಧನೆ, ಭಜನೆ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ನಾಡಿನಾದ್ಯಂತ ಭಕ್ತಿಭಾವದ ವಾತಾವರಣವನ್ನು ಸೃಷ್ಟಿಸಿವೆ. ನವರಾತ್ರಿಯ ಈ ಪವಿತ್ರ ದಿನಗಳಲ್ಲಿ ದೇವಸ್ಥಾನಗಳಲ್ಲಿ ನಡೆಯುವ ಭಜನಾ ಕಾರ್ಯಕ್ರಮಗಳು ಭಕ್ತರಲ್ಲಿ ಆಧ್ಯಾತ್ಮಿಕ ಚೈತನ್ಯ ತುಂಬುವುದರ ಜತೆಗೆ ಧಾರ್ಮಿಕ ಪರಂಪರೆಯನ್ನು ಉಳಿಸಿ ಬೆಳೆಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ.

ಇದರ ಅಂಗವಾಗಿ ಬನವಾಸಿಯ ಐತಿಹಾಸಿಕ ಶ್ರೀ ಮಧುಕೇಶ್ವರ ದೇವಸ್ಥಾನದಲ್ಲಿ ಶಿರಸಿ ತಾಲೂಕಿನ ಗೋಲಗೇರಿಯ ಭಗವದ್ಗೀತಾ ಮಾತೃ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ದೇವಿಯ ಸ್ತುತಿ, ಭಕ್ತಿಗೀತೆಗಳು ಹಾಗೂ ನಾಮಸ್ಮರಣೆಯ ಮೂಲಕ ಭಕ್ತಿಭಾವವನ್ನು ಮೇಳೈಸಲಾಯಿತು. ಭಜನಾ ಗಾಯನದಿಂದ ದೇವಸ್ಥಾನದ ಧಾರ್ಮಿಕ ವಾತಾವರಣ ಮತ್ತಷ್ಟು ಕಳೆಗಟ್ಟಿತು. ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಭಕ್ತಿಯಿಂದ ದೇವರ ನಾಮಸ್ಮರಣೆ ಮಾಡಿದರು.

ಶರನ್ನವರಾತ್ರಿ ಉತ್ಸವದ ಅಂಗವಾಗಿ ಶ್ರೀ ಮಧುಕೇಶ್ವರ ದೇವಸ್ಥಾನದಲ್ಲಿ ಪ್ರತಿದಿನ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ದೇವರ ದರ್ಶನ ಹಾಗೂ ಧಾರ್ಮಿಕ ಆಚರಣೆಗಳಲ್ಲಿ ಭಕ್ತರು ಅದಮ್ಯ ಭಕ್ತಿಭಾವದಿಂದ ಪಾಲ್ಗೊಳ್ಳುತ್ತಿದ್ದಾರೆ.

– ವರದಿ: ಸುಧೀರ್‌ ನಾಯರ್‌, ಬನವಾಸಿ.

Canara Next
Canara Next
ಕಳೆದ 15 ವರ್ಷಗಳಿಂದ ಕನ್ನಡದ ಹಲವು ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪ ಸಂಪಾದಕರಾಗಿ ಕಾರ್ಯ ನಿರ್ವಹಿಸಿರುವ ಸತೀಶ್‌ ಮಾಗೋಡು, ಸದ್ಯ ಫ್ರೀಲಾನ್ಸ್‌ ಪತ್ರಕರ್ತರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿಜ್ಞಾನ-ತಂತ್ರಜ್ಞಾನ, ಸೈಬರ್‌ ಕ್ರೈಂ ಜಾಗೃತಿಯ ನೂರಾರು ಲೇಖನಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ. ಯಾವುದೇ ವಿಷಯವಾದರೂ ಓದುಗರ ಮನ ಮುಟ್ಟುವಂತೆ ಪ್ರಸ್ತುತಪಡಿಸುವುದು ಇವರ ವಿಶೇಷತೆ. ಪ್ರಸ್ತುತ, ಕೆನರಾ ನೆಕ್ಸ್ಟ್‌ ನ್ಯೂಸ್‌ ಪೋರ್ಟಲ್‌ನ ಪ್ರಧಾನ ಸಂಪಾದಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

- Advertisment -
Ad
Ad
Ad
Ad
Ad

Most Popular

Recent Comments

error: Content is protected !!
Share